ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಮತ್ತು ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಗುಟ್ಕಾ ಮಾರಾಟ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ, ಕಾಲೇಜಿನಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ತಂಬಾಕು ವಸ್ತು ಮಾರಾಟ ಮಾಡುವಂತಿಲ್ಲ. ಆದರೂ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ರಕರಣ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ರಿಪೋರ್ಟ್
ಬೆಜ್ಜವಳ್ಳಿಯಲ್ಲಿ ದಿಢೀರ್ ದಾಳಿ ನಡೆಸಿದ ಅರೋಗ್ಯಾಧಿಕಾರಿಗಳು, ಶಾಲಾ, ಕಾಲೇಜು ಆವರಣದ ಬಳಿ ಗುಟ್ಕಾ, ತಂಬಾಕು ವಸ್ತು ಮಾರಾಟ ಮಾಡುತ್ತಿದ್ದದ್ದನ್ನು ಪತ್ತೆ ಹಚ್ಚಿದ್ದಾರೆ. ಇನ್ನು, ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡುತ್ತಿದ್ದದ್ದನ್ನು ಗುರುತಿಸಿ, ಪ್ರಕರಣ ದಾಖಲಿಸಿದ್ದಾರೆ. ಒಟ್ಟು 28 ಪ್ರಕರಣ ದಾಖಲು ಮಾಡಲಾಗಿದೆ. ಆರೋಗ್ಯ ನಿರೀಕ್ಷಕ ಜಗದೀಶ್, ಮೇಲ್ವಿಚಾರಕ ವೆಂಕಟಕೃಷ್ಣಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಭದ್ರಾವತಿ ರಿಪೋರ್ಟ್
ಮತ್ತೊಂದೆಡೆ ಭದ್ರಾವತಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಆರ್.ಗಾಯತ್ರಿ ನೇತೃತ್ವದಲ್ಲಿ ದಾಳಿ ನಡೆಸಿ, ಗುಟ್ಕಾ, ತಂಬಾಕು ಮಾರಾಟ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 102 ಪ್ರಕರಣ ದಾಖಲು ಮಾಡಿಕೊಂಡು, 7 ಸಾವಿರ ರೂ ದಂಡ ವಸೂಲಿ ಮಾಡಲಾಯಿತು. ಸಿ.ಎನ್.ರಸ್ತೆ, ತರೀಕೆರೆ ರಸ್ತೆ, ರೈಲ್ವೆ ಸ್ಟೇಷನ್ ಮುಂಭಾಗ ಮತ್ತು ಬಿ.ಹೆಚ್.ರಸ್ತೆಯ ವಿವಿಧೆಡೆ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]