ಅಡಕೆ ಗರಿ ಹಿಡಿದು ಪಾದಯಾತ್ರೆ, ಸರ್ಕಾರಕ್ಕೆ 20 ದಿನದ ಗಡುವು, ಮುಂದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2022

SAGARA | ತಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 20 ದಿನದ ಗಡುವು ನೀಡಲಾಗುತ್ತಿದೆ. ಆ ಬಳಿಕ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ. (20 day deadline)

Atiyas Motors

ರೈತ ಹಾಗೂ ಕೂಲಿ ಕಾರ್ಮಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಸಾಗರ ತಾಲೂಕು ಆವಿನಹಳ್ಳಿಯಿಂದ ಸಾಗರ ಪಟ್ಟಣದವರೆಗೆ ನಡೆದ ಪಾದಯಾತ್ರೆ ವೇಳೆ ರೈತರು ಸರ್ಕಾರಕ್ಕೆ 20 ದಿನದ ಗಡುವು ನೀಡಿ ಎಚ್ಚರಿಸಿದ್ದಾರೆ.

(20 day deadline)

ರೈತರ ಬೇಡಿಕೆಗಳು ಏನು?

ಎಲೆಚುಕ್ಕೆ ರೋಗಕ್ಕೆ ಪರಿಹಾರ ಕಂಡುಕೊಳ್ಳಬೇಕು. ಅಡಕೆ ಆಮದು ಮಾಡಿಕೊಳ್ಳಲು ನೀಡಿರುವ ಅನುಮತಿ ಹಿಂಪಡೆಯಬೇಕು. ಅಡಕೆ ತೋಟ ಹಾನಿಗೆ ಪರಿಹಾರ ಕೊಡಬೇಕು. ಅಡಕೆ ರೋಗಕ್ಕೆ ಸಂಶೋಧನೆಯನ್ನು ಕೇಂದ್ರ ಸರ್ಕಾರದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿಗೆ ಹಸ್ತಾಂತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಆಗ್ರಹಿಸಿದರು.

(20 day deadline)

ಸುಡು ಬಿಸಿಲಿನಲ್ಲಿ ಪಾದಯಾತ್ರೆ

ಸುಡು ಬಿಸಲಿನಲ್ಲೆ ರೈತರು ಆವಿನಹಳ್ಳಿಯಿಂದ ಸಾಗರದ ತಾಲೂಕು ಕಚೇರಿವರೆಗೆ 12 ಕಿ.ಮೀ ಪಾದಯಾತ್ರೆ ನಡೆಸಿದರು. ಎಲೆಚುಕ್ಕೆ ರೋಗಕ್ಕೆ ತುತ್ತಾಗಿ ಒಣಗಿದ್ದ ಅಡಕೆ ಮರದ ಗರಿಗಳನ್ನು ಮೆರವಣಿಗೆಯಲ್ಲಿ ಹಿಡಿದು ರೈತರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.

ಯಾರೆಲ್ಲ ಏನೇನು ಹೇಳಿದರು.

ಎಲ್ಲವನ್ನು ಹೋರಾಟದ ಮೂಲಕವೆ ಪಡೆದುಕೊಳ್ಳಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ಬದುಕಿಗೆ ಸಂಚಕಾರ ಬಂದಾಗ ಪಕ್ಷಗಳ ಆಲೋಚನೆ ಮಾಡಬಾರದು. ಎಲ್ಲರು ಒಟ್ಟಾಗಿ ಹೋರಾಟ ನಡೆಸೋಣ.ರಾಮಪ್ಪ, ಸಿಗಂದೂರು ದೇವಸ್ಥಾನದ ಧರ್ಮದರ್ಶಿ

Shimoga Nanjappa Hospital

ಮೊದಲು ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಅಡಕೆ ಬೆಳೆಯಲಾಗುತ್ತಿತ್ತು. ಈಗ ಅಡಕೆ ಮಲೆನಾಡನ್ನು ಆವರಿಸಿಕೊಂಡಿದೆ. ಎಲೆ ಚುಕ್ಕೆ ರೋಗದಿಂದ ಅಡಕೆ ನಾಶವಾದರೆ ರೈತರು, ಕೂಲಿ ಕಾರ್ಮಿಕರ ಭವಿಷ್ಯದ ಕಥೆಯೇನು? ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ನೀಡುತ್ತದೆ ಎಂಬ ನಂಬಿಕೆ ಇದೆ. ಇಲ್ಲವಾದಲ್ಲಿ ಹೋರಾಟವೆ ಮಾರ್ಗೋಪಾಯ.ಕಾಗೋಡು ತಿಮ್ಮಪ್ಪ, ಮಾಜಿ ಸಚಿವ

ಕ್ಲಿಕ್ ಮಾಡಿ ಇದನ್ನೂ ಓದಿ ಕೊನೆ ಕ್ಷಣದಲ್ಲಿ ಶಾಕ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ದೇಶದಲ್ಲಿ 16 ಲಕ್ಷ ಮೆಟ್ರಿಕ್ ಟನ್ ಅಡಕೆ ಬೆಳೆಯಲಾಗುತ್ತಿದೆ. ಈ ಪೈಕಿ 9 ಲಕ್ಷ ಮೆಟ್ರಿಕ್ ಟನ್ ಅಡಕೆ ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. 16 ಜಿಲ್ಲೆಗಳಿಗೆ ಅಡಕೆಯೆ ಕಾಮಧೇನು. ಎಲೆಚುಕ್ಕೆ ರೋಗದಿಂದ ತೋಟಗಳು ನಾಶವಾಗುತ್ತಿವೆ. 30 ಕ್ವಿಂಟಾನ್ ಇಳುವರಿ ಬರುತ್ತಿದ್ದ ತೋಟದಲ್ಲಿ 1 ಕ್ವಿಂಟಾಲ್ ಕೂಡ ಸಿಗುತ್ತಿಲ್ಲ.ತೀ.ನಾ.ಶ್ರೀನಿವಾಸ್, ಕಾಂಗ್ರೆಸ್ ಮುಖಂಡ

ನಾಗೇಂದ್ರ ಭಟ್ ಹಳೇ ಇಕ್ಕೇರಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ರಾಜಕೀಯ ನಾಯಕರು, ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2022

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment