ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 10 ಸೆಪ್ಟಂಬರ್ 2020
ಡ್ರಗ್ಸ್ ಜಾಲದ ಹಿಂದಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಸೇವನೆ ಆರೋಪ ಕೇಳಿ ಬಂದಿದೆ. ಇದರ ಹಿಂದೆ ರಾಜಕಾರಣಿಗಳ ಮಕ್ಕಳು ಇರುವ ಕುರಿತು ಹೇಳಲಾಗುತ್ತಿದೆ. ಯಾರ ಪ್ರಭಾವಕ್ಕೂ ಮಣಿಯದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಬೇಕು ಎಂದು ಒತ್ತಾಯಿಸಿದರು.
2014ರಲ್ಲಿ ಎಬಿವಿಪಿ ವತಿಯಿಂದ ನಶಾ ಮುಕ್ತ ಭಾರತ ಅಭಿಯಾನ ಕೈಗೊಳ್ಳಲಾಗಿತ್ತು. ಈಗ ಡ್ರಗ್ಸ್ ದಂಧೆ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ. ಈ ಸಂದರ್ಭದಲ್ಲಿ ಡ್ರಗ್ಸ್ ನಿರ್ಮೂಲನೆಗೊಳಿಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಮನವಿ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]