ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 16 ನವೆಂಬರ್ 2021
ನಾಡ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನ್ನು ಬಂಧಿಸಿದ್ದಾರೆ.
ಸಾಗರ ತಾಲೂಕು ಭಾರಂಗಿ ಹೋಬಳಿಯ ಉಪ ತಹಶೀಲ್ದಾರ್ ನಾಡ ಕಚೇರಿ ಮೇಲೆ ಇವತ್ತು ಎಸಿಬಿ ದಾಳಿಯಾಗಿದೆ. ಈ ವೇಳೆ ಹಣ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಏನಿದು ಪ್ರಕರಣ?
ಆಸ್ತಿ ಹಿಸ್ಸೆ ಸಂಬಂಧ ಖಾತೆ ಮಾಡಿಸಲು ಸ್ಥಳೀಯರೊಬ್ಬರು ಹೋಗಿದ್ದರು. ಈ ವೇಳೆ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ, 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇವತ್ತು 8 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್’ಪಿ ಲೋಕೇಶ್ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422