ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : 4.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ವಕೀಲರ ಭವನ ಫೆ.11ರಂದು ಲೋಕಾರ್ಪಣೆಗೊಳ್ಳಲಿದೆ. ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ವಕೀಲರ ಭವನ ಉದ್ಘಾಟನೆ ಮಾಡಲಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲರ ಸಂಘದ ಉಪಾಧ್ಯಕ್ಷ ಹೆಚ್.ಆರ್.ಶ್ರೀಧರ್, ನ್ಯಾಯಮೂರ್ತಿ ಆರ್.ದೇವದಾಸ್ ಅಧ್ಯಕ್ಷ ವಹಿಸಲಿದ್ದಾರೆ. ಸಚಿವರಾದ ಹೆಚ್.ಕೆ.ಪಾಟೀಲ್, ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಹಾಲೇಖನಾಧಿಕಾರಿ ಕೆ.ಎಸ್.ಭರತ್ ಕುಮಾರ್, ವಕೀಲರ ಪರಿಷತ್ ಸದಸ್ಯ ಪಿ.ಪಿ.ಹೆಗ್ಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಹಿರಿಯ ನ್ಯಾಯವಾದಿ ರಾಘವೇಂದ್ರ ಮಾತನಾಡಿ, ಮೂರು ಅಂತಸ್ತಿನ ಕಟ್ಟಡದ ಮೇಲ್ಭಾಗದಲ್ಲಿ ಸಭಾ ಭವನ ನಿರ್ಮಿಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ. ವಕೀಲರ ಭವನ ನಿರ್ಮಾಣಕ್ಕೆ ವಕೀಲರ ಸಂಘದ ಹಿಂದಿನ ಕಾರ್ಯಕಾರಿ ಸಮಿತಿಗಳು, ಈಗಿನ ಸಮಿತಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.
ವಕೀಲರಾದ ಹೆಚ್.ಎನ್.ದಿವಾಕರ್, ರಮೇಶ್, ವಿ.ಶಂಕರ್, ಸಿ.ಪಿ.ಸದಾಶಿವ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ವಿದ್ಯುತ್ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್ – ಫಟಾಫಟ್ ನ್ಯೂಸ್