ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒಂದು ವಾರದಲ್ಲಿ ಕ್ಷಮೆ ಕೋರಬೇಕು. ಇಲ್ಲವಾದರೆ ಮಾನನಷ್ಟ ಮೊಕದಮೆ ಹೂಡುವುದಾಗಿ ಸಾಗರದ ವಕೀಲ ಪ್ರವೀಣ್ ಕುಮಾರ್ ಅವರು ತಮ್ಮ ವಕೀಲರ ಮೂಲಕ ನೊಟೀಸ್ ಜಾರಿ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದಲ್ಲಿ ನಡೆದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ʼಸೋನಿಯಾ ಗಾಂಧಿ ಅವರ ವಿರುದ್ಧ ತಡಕಲಾಂಡಿಯೊಬ್ಬ ದೂರು ನೀಡಿದರೆ ಪೊಲೀಸರು ಎಫ್‌ಐಆರ್ ದಾಖಲಿಸುತ್ತಾರೆ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲʼ ಎಂದು ಹೇಳಿದ್ದರು.
ಇದನ್ನೂ ಓದಿ | ಸೋನಿಯಾ ಗಾಂಧಿ ವಿರುದ್ಧದ ಕೇಸ್, ಸಾಗರ ಪೊಲೀಸರಿಗೆ ಹೈಕೋರ್ಟ್ ಚಾಟಿ, ಏನಿದು ಪ್ರಕರಣ?
ತಡಕಲಾಂಡಿ ಪದ ಬಳಕೆ ಮಾಡಿರುವ ಡಿ.ಕೆ.ಶಿವಕುಮಾರ್ ಅವರು ಒಂದು ವಾರದ ಒಳಗೆ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮಾನನಷ್ಟ ಮೊಕದಮೆ ದಾಖಲಿಸಲಾಗುತ್ತದೆ ಎಂದು ಮಾರ್ಚ್ 26ರಂದು ನೊಟೀಸ್ ಜಾರಿಗೊಳಿಸಿದಾರೆ. ಪ್ರವೀಣ್ ಕುಮಾರ್ ಅವರು ತಮ್ಮ ವಕೀಲ ಯೋಗೇಂದ್ರ ಮತ್ತು ನರೇಂದ್ರ ಅವರ ಮೂಲಕ ನೊಟೀಸ್ ಜಾರಿ ಮಾಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]