ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021
ಆನಂದಪುರದಲ್ಲಿ ಮೊದಲ ದಿನದ ಲಾಕ್ ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಕರೋನ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಇವತ್ತು ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು.

ಲಾಕ್ ಡೌನ್ ಅವಧಿ ಆರಂಭವಾಗುತ್ತಿದ್ದಂತೆ ಆನಂದಪುರದ ಎಲ್ಲ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಅನ್ನುತ್ತಿದ್ದವು. ಮೊದಲ ದಿನ ಕಠಿಣ ಲಾಕ್ ಡೌನ್‍ಗೆ ಜನ ಬೆಂಬಲ ಉತ್ತಮವಾಗಿತ್ತು.
ಕೃಷಿ ಚಟುವಟಿಕೆಗೆ ಯಾವುದೆ ನಿರ್ಬಂಧವಿರಲಿಲ್ಲ. ಹಾಗಾಗಿ ತೋಟ, ಗದ್ದೆಗಳಿಗೆ ಹೋಗಿ ಬರಲು ಅವಕಾಶವಿತ್ತು. ಕೃಷಿಕರು ಜಮೀನುಗಳಿಗೆ ಹೋಗಿ ಕೆಲಸ ಮಾಡಿದರು. ಆನಂದಪುರದಲ್ಲಿ ಲಾಕ್ ಡೌನ್ ಹೇಗಿತ್ತು ಎಂಬುದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
