ಸಿಗಂದೂರು ಸೇತುವೆ: ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಸಾಗರ: ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆಂದು ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ ಯುವಕನೊಬ್ಬ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ರಾಯದುರ್ಗ ನಿವಾಸಿ ಉಮೇಶ್ (30) ಮೃತ ದುರ್ದೈವಿ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬುಧವಾರ ಮಧ್ಯಾಹ್ನ ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಉಮೇಶ್ ಈಜಾಡಲು ನೀರಿಗೆ ಇಳಿದಿದ್ದರು. ಆದರೆ, ನೀರಿನ ತೀವ್ರ ಸೆಳತಕ್ಕೆ ಸಿಲುಕಿದ ಅವರು ನಿಯಂತ್ರಣ ಸಿಗದೆ ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದರು. ಜೊತೆಯಲ್ಲಿದ್ದವರು ತಕ್ಷಣವೇ ಈ ಬಗ್ಗೆ ಸ್ಥಳೀಯರಿಗೆ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

Andhra-Person-drowned-in-Sharavathi-river-near-sigandur-bridge

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸಾಗರ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಮೀನುಗಾರರು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಶೋಧ ಕಾರ್ಯ ಕೈಗೊಂಡರು. ಕೆಲವು ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಉಮೇಶ್ ಅವರ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.