ಸಾಗರ: ಆನಂದಪುರ ಗ್ರಾಮದ ಅಶೋಕ ರಸ್ತೆಯಲ್ಲಿ ಯುವಕನೊಬ್ಬ (areca trader) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಶೋಕ ರಸ್ತೆಯ ನಿವಾಸಿ ನವೀನ್ (27) ನೇಣಿಗೆ ಶರಣಾದ ಯುವಕ. ನವೀನ್ ಕಳೆದ ಕೆಲವು ವರ್ಷಗಳಿಂದ ಸಣ್ಣದಾಗಿ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದರು. ಇವತ್ತು ಮನೆಯ ಹಿಂಭಾಗದಲ್ಲಿ ಜಾತ್ರೆಗೆ ಸಂಬಂಧಿಸಿದಂತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಮನೆಯವರು, ಕೊಠಡಿಯ ಒಳಗೆ ನೋಡಿದಾಗ ನವೀನ್ ಹಗ್ಗದಿಂದ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ತಕ್ಷಣ ನವೀನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ದೇವಸ್ಥಾನಕ್ಕೆ ಪೂಜೆಗೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು

