150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 13 ನವೆಂಬರ್ 2021

ಜೋಗ, ಕಾರ್ಗಲ್, ಲಿಂಗನಮಕ್ಕಿ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆಹಾರ ಅಥವಾ ನೀರಿನಲ್ಲಿ ಸಮಸ್ಯೆ ಉಂಟಾಗಿ ಈ ರೀತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಏನಿದು ಪ್ರಕರಣ?

ಶುಕ್ರವಾರ ಬೆಳಗ್ಗೆಯಿಂದಲೇ ಜನರು ದಿಢೀರ್ ಅಸ್ವಸ್ಥಗೊಂಡ ಕಾರ್ಗಲ್ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುವರಿ ಚಿಕಿತ್ಸೆ ಅಗತ್ಯ ಇದ್ದವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಎಸ್.ಮೋಹನ್ ಅವರು ಹೆಚ್ಚುವರಿ ವೈದ್ಯರು ಮತ್ತು ಅಗತ್ಯ ಔಷಧವನ್ನು ಕಾರ್ಗಲ್ ಆಸ್ಪತ್ರೆಗೆ ಒದಗಿಸಿದ್ದಾರೆ.

ಘಟನೆಗೆ ಕಾರಣವೇನು?

ಜೋಗ, ಕಾರ್ಗಲ್’ನಲ್ಲಿ ಎರಡು ದಿನದ ಹಿಂದೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವರು ಅಸ್ವಸ್ಥಗೊಂಡಿದ್ದಾರೆ. ಇನ್ನು, ಡಾಬಾ ಒಂದರಲ್ಲಿ ಊಟ ಮಾಡಿದ 12 ಮಂದಿಯಲ್ಲೂ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹಾಗಾಗಿ ಆಹಾರದಲ್ಲಿ ವ್ಯತ್ಯಾಸವಾಗಿರಬೇಕು ಅಥವಾ ನೀರಿನಲ್ಲಿ ಸಮಸ್ಯೆಯಾಗಿರುವ ಸಾಧ್ಯತೆ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

AVvXsEg7D64eppM2Y2YXBDC80Q2TdBmP2uvjR kzBF IPI

ಚಿಕಿತ್ಸೆಗೆ ಸಕಲ ವ್ಯವಸ್ಥೆ

ಇನ್ನು, ಮಾಧ್ಯಮಗಳ ಜೊತೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಎಸ್.ಮೋಹನ್ ಅವರು, ಅಗತ್ಯ ಚಿಕಿತ್ಸೆ ಒದಗಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಕಾರ್ಗಲ್ ಮತ್ತು ಸಾಗರ ಆಸ್ಪತ್ರೆಗಳಲ್ಲಿ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಗಲ್ ಆಸ್ಪತ್ರೆಯಲ್ಲಿ ಬಂದು ಹಲವರು ಚಿಕಿತ್ಸೆ ಪಡೆದಿದ್ದಾರೆ. 15 ಜನರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಸಮೀಪದ ಖಾಸಗಿ ಆಸ್ಪತ್ರೆಯಲ್ಲಿಯೂ 50ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಕಾರ್ಗಲ್ ಆಸ್ಪತ್ರೆಗೆ ಇಬ್ಬರು ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದೆ. ನರ್ಸಿಂಗ್ ಸಿಬ್ಬಂದಿ, ಹೆಚ್ಚುವರಿ ಇಂಜೆಕ್ಷನ್, ಔಷಧವನ್ನು ಒದಗಿಸಲಾಗಿದೆ. ತುರ್ತು ಸಂದರ್ಭ ರೋಗಿಗಳನ್ನು ಸಾಗರ ಆಸ್ಪತ್ರೆಗೆ ಕರೆದೊಯ್ಯಲು ಎರಡು ಆಂಬುಲೆನ್ಸ್’ಗಳನ್ನು ನಿಯೋಜಿಸಲಾಗಿದೆ.

ಇನ್ನು, ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ. ಇಲ್ಲಿಯೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVT JULY NANJAPPA HOSPITAL HOME LAB TESTING

ನೀರು, ಆಹಾರದ ಸ್ಯಾಂಪಲ್ ಸಂಗ್ರಹ

ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಜೋಗ, ಕಾರ್ಗಲ್’ನಲ್ಲಿ ನಡೆದ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಆಹಾರದ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ನೀರು ಪೂರೈಕೆ ಕೇಂದ್ರಕ್ಕೂ ಭೇಟಿ ನೀಡಿ ಸ್ಯಾಂಪಲ್’ಗಾಗಿ ನೀರು ಸಂಗ್ರಹಿಸಲಾಗಿದೆ ಎಂದು ಟಿಹೆಚ್ಒ ಡಾ. ಕೆ.ಎಸ್.ಮೋಹನ್ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 13, 2021

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment