ನಗರಸಭೆಯಲ್ಲಿ ರಾದ್ಧಾಂತ, ಸಾಗರದಲ್ಲಿ ನೀರು ಪೂರೈಕೆ, ಕಸ ಸಂಗ್ರಹ ಸ್ಥಗಿತ, ಈತನಕ ಏನೇನೆಲ್ಲ ಆಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2022

ಸಾಗರ : ಪಟ್ಟಣದಲ್ಲಿ ನೀರು ಸರಬರಾಜು ಇಲ್ಲ. ಮನೆ ಮನೆಯಿಂದ ಕಸ ಸಂಗ್ರಹವು ಸ್ಥಗಿತ. ನ್ಯಾಯಕ್ಕಾಗಿ ಪಟ್ಟು ಹಿಡಿದ ಪೌರ ಕಾರ್ಮಿಕರು, ನಗರಸಭೆ ಸಿಬ್ಬಂದಿ. (attack on commissioner)

Shimoga nanjappa hospital

ಸಾಗರ ನಗರ ಸಭೆ ಪೌರಾಯುಕ್ತರ ಮೇಲಿನ ಹಲ್ಲೆ ಖಂಡಿಸಿ, ಸಿಬ್ಬಂದಿ ಮತ್ತು ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲ್ಲೆಕೋರರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದೆ ಕಾರಣಕ್ಕೆ ಸಾಗರ ಪಟ್ಟಣದಲ್ಲಿ ಇವತ್ತು ಕಸ ಸಂಗ್ರಹ ಮಾಡದೆ, ನೀರು ಪೂರೈಕೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ.

(attack on commissioner)

ಪೌರಾಯುಕ್ತರ ಮೇಲೆ ಹಲ್ಲೆಯಾಗಿದ್ದೇಕೆ?

LIC-HOME-NEW-ADVTಹಣ್ಣಿನ ಅಂಗಡಿ ತೆರವು ವಿಚಾರ ಸಾಗರ ನಗರಸಭೆ ಆವರಣದಲ್ಲಿ ಹೈಡ್ರಾಮಾಗೆ ಕಾರಣವಾಗಿದೆ. ಪೌರಾಯುಕ್ತರ ಮೇಲೆಯೆ ಹಲ್ಲೆಯಾಗಿರುವ ಆರೋಪ ಕೇಳಿ ಬಂದಿದೆ. ಇದರಿಂದ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ದಿಢೀರ್ ಪ್ರತಿಭಟನೆ ನಡೆಸಿದರು.

ಕೆನರಾ ಬ್ಯಾಂಕ್ ಮುಂಭಾಗ ಶಾಬಾಜ್ ಎಂಬುವವರಿಗೆ ಸೇರಿದ ಹಣ್ಣಿನ ಅಂಗಡಿ ತೆರವು ವಿಚಾರ ಪ್ರತಿಭಟನೆ, ನೂಕಾಟ ತಳ್ಳಾಟಕ್ಕೆ ಕಾರಣವಾಗಿದೆ.

(attack on commissioner)

ಹಣ್ಣು ಬೀದಿಗೆ, ಹಣ ನಾಪತ್ತೆ ಆರೋಪ

ಶಾಬಾಜ್ ಎಂಬುವವರು ಕೆನರಾ ಬ್ಯಾಂಕ್ ಮುಂಭಾಗ ಹಣ್ಣಿನ ಅಂಗಡಿ ನಡೆಸುತ್ತಿದ್ದರು. ಚರಂಡಿ ರಿಪೇರಿ ಕಾಮಗಾರಿ ಹಿನ್ನೆಲೆ ಹಣ್ಣಿನ ಗಾಡಿಗಳನ್ನು ತೆರವು ಮಾಡುವಂತೆ ನಗರಸಭೆ ಅಧಿಕಾರಿಗಳು ಸೂಚಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೂ ಶಾಬಾಜ್ ಅಂಗಡಿ ತೆರವು ಮಾಡಿರಲಿಲ್ಲ. ರಿಪೇರಿ ಕಾರ್ಯ ಹಿನ್ನೆಲೆ ನಗರಸಭೆ ಅಧಿಕಾರಿಗಳೆ ಅಂಗಡಿ ತೆರವುಗೊಳಿಸಿದ್ದಾರೆ. ಈ ಸಂದರ್ಭ ನಗರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು ಹಣ್ಣುಗಳನ್ನು ರಸ್ತೆಗೆ ಎಸೆದಿದ್ದಾರೆ. ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಹಣ್ಣು, ನಗದು ಹೊತ್ತೊಯ್ದಿದ್ದಾರೆ ಎಂದು ಶಾಬಾಜ್ ಆರೋಪಿಸಿದ್ದಾರೆ. ಆದರೆ ಇದನ್ನು ಪೌರಾಯುಕ್ತರು ಮತ್ತು ನಗರಸಭೆ ಸಿಬ್ಬಂದಿ ತಿರಸ್ಕರಿಸಿದ್ದಾರೆ.

Congress Protest in Sagara Nagara Sabhe

(attack on commissioner)

ಅಖಾಡಕ್ಕೆ ಧುಮುಕಿದ ಕಾಂಗ್ರೆಸ್

ಹಣ್ಣು ವ್ಯಾಪಾರಿಯ ಮೇಲೆ ನಗರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರಸಭೆಯ ಕಾಂಗ್ರೆಸ್ ಸದಸ್ಯರು, ಕೆಲವು ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮನವಿ ಸಲ್ಲಿಸುವ ವೇಳೆ ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರನ್ನು ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

(attack on commissioner)

ಅಧಿಕಾರಿಗಳು, ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳು, ಸಿಬ್ಬಂದಿ ದಿಢೀರ್ ಪ್ರತಿಭಟನೆ ನಡೆಸಿದರು. ನಗರಸಭೆ ಸಿಬ್ಬಂದಿಯ ಪ್ರತಿಭಟನೆಗೆ ಬಿಜೆಪಿ ಬೆಂಬಲವಾಗಿ ನಿಂತಿತು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಅವರ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ನಗರಸಭೆ ಸಿಬ್ಬಂದಿ ಬೆಂಬಲಕ್ಕೆ ನಿಂತರು.

Sagara BJP and Nagara Sabhe Protest

ಪ್ರತಿಭಟನೆ ವೇಳೆ ಕುಸಿದು ಬಿದ್ದು ಸಾವು

ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ ಪರವಾಗಿ ಸಾಗರದ ಈಡಿಗ ಸಮುದಾಯದ ಮುಖಂಡರು https://chat.whatsapp.com/KChu2C1bGTM2v9HmZlfIkSಪ್ರತಿಭಟನೆ ನಡೆಸಿದರು. ಇದರಲ್ಲಿ ಭಾಗಿಯಾಗಿದ್ದ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ ಸಹೋದರ ಗಣಪತಿ ಬರವಳ್ಳಿ (50) ಬುಧವಾರ ಸಂಜೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಿಗೆ ಈಡಿಗ ಸಂಘದವರು ಗಣಪತಿ ಬರವಳ್ಳಿ ಪರವಾಗಿ ಮೌನಾಚರಣೆ ಮಾಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.

ಮುಂದುವರೆದ ಪೌರ ಕಾರ್ಮಿಕರ ಪ್ರತಿಭಟನೆ

ಪೌರಾಯುಕ್ತರ ಮೇಲಿನ ಹಲ್ಲೆ ಖಂಡಿಸಿ ಪೌರ ಕಾರ್ಮಿಕರು, ನಗರಸಭೆ ಸಿಬ್ಬಂದಿ ಪ್ರತಿಭಟನೆ ಮುಂದುವರೆಸಿದ್ದಾರೆ. ಕಸ ಸಂಗ್ರಹ ಮಾಡುವ ವಾಹನಗಳನ್ನು ನಗರಸಭೆ ಆವರಣದಲ್ಲಿ ಸಾಲಾಗಿ ನಿಲ್ಲಿಸಿ, ಕೆಲಸ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ನಗರದಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಿದೆ. ಪೌರಾಯುಕ್ತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಷ್ಕರ ನಿರತರು ಆಗ್ರಹಿಸಿದ್ದಾರೆ.

ALSO READ –  ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ

Sagara nagara SAbhe

ನೌಕರರ ಸಂಘದಿಂದ ದೂರು

ಇನ್ನು, ಘಟನೆ ಸಂಬಂಧ ಪೌರ ಸೇವಾ ನೌಕರರ ಸಂಘದ ವತಿಯಿಂದ ಸಾಗರ ನಗರ ಠಾಣೆಗೆ ದೂರು ನೀಡಲಾಗಿದೆ. ಪೌರಾಯುಕ್ತರ ಕರ್ತವ್ಯಕ್ಕೆ ಅಡ್ಡಿ, ಕಚೇರಿಗೆ ನುಗ್ಗಿ ದಾಂಧಲೆ, ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2022

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment