ಶಿವಮೊಗ್ಗ ಲೈವ್.ಕಾಂ | ಸಾಗರ | 2 ಸೆಪ್ಟೆಂಬರ್ 2019
ಪ್ರೀತಿಸಲು ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಕೆನ್ನೆ ಮೇಲೆ ಇರಿದು ಪರಾರಿಯಾಗಿದ್ದಾನೆ. ಯುವತಿಗೆ ಸಾಗರದ ಆಸ್ಪತ್ರೆಗೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ರಾಖಿ ಕಟ್ಟಿಸಿಕೊಳ್ಳಲು ಕರೆಸಿ ಕೆನ್ನೆಗೆ ಇರಿದ
ರಾಕೇಶ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ನಿರಾಕರಿಸಿದ ಹಿನ್ನೆಲೆ, ಅಣ್ಣ, ತಂಗಿಯಂತೆ ಇರೋಣ ಎಂದಿದ್ದ. ಅದರಂತೆ ಯುವತಿ ಮನೆ ಬಳಿ ಬಂದು ಇವತ್ತು ರಾಖಿ ಕಟ್ಟಿಸಿಕೊಳ್ಳುವುದಾಗಿ ಹೇಳಿ ಕರೆಸಿಕೊಂಡು, ಯುವತಿ ಕೆನ್ನೆಗೆ ಚಾಕುವಿನಿಂದ ಇರಿದಿದ್ದಾನೆ.
ಘಟನೆ ಬಳಿಕ ರಾಕೇಶ ನಾಪತ್ತೆಯಾಗಿದ್ದಾನೆ. ಆತನ ಪತ್ತೆಗೆ ಸಾಗರ ಪಟ್ಟಣ ಪೊಲೀಸರು ಬಲೆ ಬೀಸಿದ್ದಾರೆ. ಯುವತಿ ಕೆನ್ನೆಗೆ ಗಾಯವಾಗಿದ್ದು, ಸಾಗರ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]