ಸಾಗರದಲ್ಲಿ ಅವ್ವ ಮಹಿಳಾ ಮಹಾ ಸಂತೆ, ಏನೇನಿರುತ್ತೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಸಾಗರ: ಇಲ್ಲಿನ ಜೀವನ್ಮುಖಿ ಸಂಸ್ಥೆಯು ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ನ. 15ರಂದು ಬೆಳಿಗ್ಗೆ 11ರಿಂದ ರಾತ್ರಿ 8ರವರೆಗೆ ಗಾಂಧಿ ಮೈದಾನದಲ್ಲಿ ಅವ್ವ ಮಹಿಳಾ ಮಹಾ ಸಂತೆ ಆಯೋಜಿಸಿದೆ ಎಂದು ಜೀವನ್ಮುಖಿ ಸಂಸ್ಥೆಯ ಎಂ.ವಿ.ಪ್ರತಿಭಾ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಭಾ, ಹೆಗ್ಗೋಡಿನ ಚರಕ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ಈ ಸಂತೆಯಲ್ಲಿ ರಾಜ್ಯದ ವಿವಿಧ ಭಾಗಗಳ ಮಹಿಳಾ ಉದ್ಯಮಿಗಳು ಸಿದ್ಧಪಡಿಸಿರುವ ಗೃಹೋತ್ಪನ್ನಗಳು, ಕೈಮಗ್ಗದ ವಸ್ತುಗಳು, ಸ್ಥಳೀಯ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ಮಾರಾಟವಿರುತ್ತದೆ ಎಂದು ತಿಳಿಸಿದರು.

ಚರಕ ಸಂಸ್ಥೆಯ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲಾಗುವುದು. ಇಕ್ರಾ ಸಂಸ್ಥೆಯ ಸಣ್ಣ ರೈತರು ಬೆಳೆದ ರಾಸಾಯನಿಕ ಮುಕ್ತ ದವಸ ಧಾನ್ಯಗಳನ್ನು ರೈತ ಮಹಿಳೆಯರು ಮಾರಾಟ ಮಾಡಲಿದ್ದಾರೆ. ಹಳೆಯ ರೇಷ್ಮೆ ಸೀರೆಗಳನ್ನು ಪಡೆದು ನಗದು ಹಣ ನೀಡುವ ವ್ಯವಸ್ಥೆ ಕೂಡ ಇರುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪದ್ಮಶ್ರೀ, ರಂಜಿನಿ, ಸರಿತಾ, ಸೌಮ್ಯಾ, ಮಮತಾ ಜೈನ್, ರೋಹಿಣಿ ಇದ್ದರು.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್‌ ಪೊಲೀಸ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment