
ಶಿವಮೊಗ್ಗ ಲೈವ್.ಕಾಂ | SAGARA | 1 ಮೇ 2020
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಒಂದು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿದೆ. ಸಾಗರ ತಾಲೂಕು ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಸಾಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಮಗು ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಮೂರು ದಿನದಿಂದ ಮಗುವಿಗೆ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಮುಂಜಾಗ್ರತಾ ಕ್ರಮವಾಗಿ ಮಗುವಿನ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]