ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |10 JANUARY 2023
ಸಾಗರ : ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಗರ ಬಂದ್ (bandh) ಬಹುತೇಕ ಯಶಸ್ವಿಯಾಗಿದೆ. ನಗರದ ಅಂಗಡಿ ಮುಂಗಟ್ಟು ಬಂದ್ ಆಗಿದ್ದವು. ಬಸ್ ನಿಲ್ದಾಣಗಳಲ್ಲಿ ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರವು ವಿರಳವಾಗಿತ್ತು.
ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಸಮೀರ್ ಎಂಬಾತ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದ. ಈ ಘಟನೆ ಬೆನ್ನಿಗೆ ಆರೋಪಿಗಳನ್ನು ಬಂಧಿಸಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಅರ್ಧ ದಿನ ಬಂದ್ ಗೆ (bandh) ಕರೆ ನೀಡಿದ್ದವು.
ಸಾಗರ ಬಂದ್ ಹೇಗಿತ್ತು?
ನಗರದಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ. ನಗರದೆಲ್ಲೆಡೆ ಅಂಗಡಿ ಮುಂಗಟ್ಟು, ಶಾಲೆ, ಕಾಲೇಜು ಬಂದ್ ಆಗಿದ್ದವು. ಬಸ್ ನಿಲ್ದಾಣದಲ್ಲಿ ಬಸ್ಸುಗಳು ಮತ್ತು ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರ ಕಡಿಮೆ ಇತ್ತು. ಸರ್ಕಾರಿ ಮತ್ತು ಕೆಲವು ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಇನ್ನು, ಬೆಳಗ್ಗೆಯಿಂದಲೆ ರಸ್ತೆಗಿಳಿದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ನಗರದ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಿದರು. ಮೀನು ಮಾರುಕಟ್ಟೆ ಬಳಿ ಹಿಂದು ಸಂಘಟನೆ ಕಾರ್ಯಕರ್ತರು, ವ್ಯಾಪಾರಿಗಳು, ಸ್ಥಳೀಯರ ನಡುವೆ ಮಾತಿನ ಚಕಮಕಿನ ನಡೆಯಿತು. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು.
ನಗರದಾದ್ಯಂತ ಮೆರವಣಿಗೆ
ಸಾಗರ ಬಂದ್ ಆಗುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬಡಾವಣೆ ಮತ್ತು ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮಾರಿಕಾಂಬ ದೇವಿ ದೇವಸ್ಥಾನದ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು. ಹಿಂದು ಸಂಘಟನೆಯ ಪ್ರಮುಖರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್
ಶಾಸಕ ಹರತಾಳು ಹಾಲಪ್ಪ ಮಾತನಾಡಿ, ‘ಧರ್ಮದ ಆಧಾರದಲ್ಲಿ ಗಲಾಟೆ ಮಾಡಲು ಪ್ರಯತ್ನಿಸುವವರಿಗೆ ಪೊಲೀಸ್ ಇಲಾಖೆ ಲಾಠಿ ಮೂಲಕ ಉತ್ತರ ನೀಡಲಿದೆ. ಮಿತಿ ಮೀರಿದರೆ ಗುಂಡಿನ ರುಚಿಯನ್ನು ನೋಡಬೇಕಾಗುತ್ತದೆ. ನಿನ್ನೆಯ ಘಟನೆ ಸಂದರ್ಭ ಪೊಲೀಸ್ ಇಲಾಖೆ ಕ್ಷಿಪ್ರವಾಗಿ ಕೆಲಸ ಮಾಡಿ, ಆರೋಪಿಗಳನ್ನು ಬಂಧಿಸಿದೆ’ ಎಂದರು.
ಇದನ್ನೂ ಓದಿ – ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ, ಈವರೆಗೂ ಏನಾಯ್ತು? ಇಲ್ಲಿದೆ ಡಿಟೇಲ್ಸ್
ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಪ್ರಮುಖರಾದ ಅ.ಪು. ನಾರಾಯಣಪ್ಪ, ಯು.ಹೆಚ್.ರಾಮಪ್ಪ, ಕೆ.ಎಸ್.ಪ್ರಶಾಂತ್, ಟಿ.ಡಿ.ಮೇಘರಾಜ್, ಭಾರತಿ ಶೆಟ್ಟಿ ಸೇರಿದಂತೆ ಹಲವರು ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422