ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SAGARA | 9 ಜೂನ್ 2022
ಶಿಕ್ಷಕರ ಕೊರತೆಯಿಂದಾಗಿ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ. ಶಾಲೆಗಳಿಗೆ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.
ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಶಾಲೆಗಳಲ್ಲಿ ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಶಿಕ್ಷಕರಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಆಪಾದಿಸಿದರು.
ಕ್ಷೇತ್ರದ ಶಾಸಕರು ಮೌನವಾಗಿದ್ದಾರೆ
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಶಾಲೆಗಳ ಮೇಲ್ಛಾವಣಿ ಹಾರಿ ಹೋಗಿದೆ. ವಿದ್ಯಾರ್ಥಿಗಳು ಆತಂಕದಲ್ಲಿಯೆ ತರಗತಿಗಳಿಗೆ ಬರುತ್ತಿದ್ದಾರೆ. ಈ ಭಾಗದ ಶಾಸಕರು ಇದ್ಯಾವುದಕ್ಕು ಗಮನ ಕೊಡದೆ ಮೌನವಾಗಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.
ವಾಜಪೇಯ ಪರಿಕಲ್ಪನೆ ಮರೆತಿದ್ದಾರೆ
ಅಟಲ್ ಬಿಹಾರಿ ವಾಜಪೇಯಿ ಅವರು ಸರ್ಕಾರಿ ಶಾಲೆಗಳಿಗೆ ಸುಣ್ಣ ಬಣ್ಣ ಹೊಡೆಸುವ ಪರಿಕಲ್ಪನೆ ಜಾರಿಗೆ ತಂದರು. ಆದರೆ ಈಗಿನ ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಪರಿಕಲ್ಪನೆಯನ್ನು ಮರೆತಿವೆ. ಹಾಗಾಗಿ ಸರ್ಕಾರಿ ಶಾಲೆಗಳು ಕೊಂಪೆಯಂತಾಗುತ್ತಿವೆ. ಪೋಷಕರು ಅನಿವಾರ್ಯವಾಗಿ ಡೊನೇಷನ್ ಕಟ್ಟಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಪ್ರಮುಖರಾದ ಸಂತೋಷ್ ಸದ್ಗುರು, ರವಿಕುಮಾರ್, ಯಶವಂತ ಪಣಿ, ನಾರಾಯಣಪ್ಪ, ಮಹಾಬಲೇಶ ಶೆಟ್ಟಿ, ಅನ್ವರ್ ಭಾಷಾ ಇದ್ದರು.
ಇದನ್ನೂ ಓದಿ – ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422