ಗೋವಾ ಪ್ರವಾಸ ಕ್ಯಾನ್ಸಲ್, ಧರ್ಮಸ್ಥಳದತ್ತ ಬೇಳೂರು, ವಿಡಿಯೋ ಬಿಡುಗಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022

ಗೋವಾದಲ್ಲಿ ಚುನಾವಣೆ ಪ್ರಚಾರಕ್ಕೆ ಹೋಗುವ ಬದಲು ಫೆಬ್ರವರಿ 12ರಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.

shimoga Nanjappa Hospital Covid Care Center

ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಫೆ.12ರಂದು ಮಧ್ಯಾಹ್ನ 12 ಗಂಟೆಗೆ ಧರ್ಮಸ್ಥಳಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ.

ಗೋವಾ ಪ್ರವಾಸ ರದ್ದು

ಮರಳು ದಂಧೆ ಮಾಡುವವರಿಂದ ಶಾಸಕ ಹರತಾಳು ಹಾಲಪ್ಪ ಅವರು ಹಣ ಪಡೆಯುತ್ತಿದ್ದಾರೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧ. ಅಲ್ಲದೆ ತಾವು ಶಾಸಕರಾಗಿದ್ದ ಅವಧಿಯಲ್ಲಿ ಮರಳು ದಂಧೆ ಮಾಡುವವರಿಂದ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲು ಸಿದ್ಧ ಎಂದು ಬೇಳೂರು ಗೋಪಾಲಕೃಷ್ಣ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ | ಧರ್ಮಸ್ಥಳದಲ್ಲಿ ಆಣೆ ಮಾಡಲು ದಿನಾಂಕ ನಿಗದಿಪಡಿಸಿದ ಶಾಸಕ ಹಾಲಪ್ಪ

ಗೋವಾದಲ್ಲಿ ಫೆ.14ರಂದು ಚುನಾವಣೆ ನಡೆಯಲಿದೆ. ಫೆ.12ರ ಸಂಜೆವರೆಗೂ ಪ್ರಚಾರ ಕಾರ್ಯ ನಡೆಯಲಿದೆ. ಆದರೆ ಗೋವಾ ಪ್ರವಾಸವನ್ನು ರದ್ದು ಮಾಡಿ, ಧರ್ಮಸ್ಥಳಕ್ಕೆ ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸ್ಪಷ್ಟಪಡಿಸಿದ್ದಾರೆ.

ಇಲ್ಲಿ ಪೂರ್ತಿ ವಿಡಿಯೋ

shimoga, live reach graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 11, 2022

Leave a Comment