SHIVAMOGGA LIVE NEWS, 10 FEBRUARY 2025
ಸಾಗರ : ಇಲ್ಲಿನ ಆರ್.ಪಿ.ರಸ್ತೆಯಲ್ಲಿ (road) ಚರಂಡಿ ನಿರ್ಮಾಣ ಕಾಮಗಾರಿ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ಶಾಸಕ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಅಗದಂತೆ ಶೀಘ್ರ ಮತ್ತು ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಾರ್ಕೆಟ್ ರಸ್ತೆ ಮತ್ತು ಬಿ.ಹೆಚ್.ರಸ್ತೆಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದ್ದೇನೆ. ಮುಂದಿನ ಮಾರಿ ಜಾತ್ರೆ ಹೊತ್ತಿಗೆ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳಲಿದೆ.
ಬೇಳೂರು ಗೋಪಾಲಕೃಷ್ಣ, ಶಾಸಕ
ತ್ವರಿತವಾಗಿ ನಡೆಯುತ್ತಿದೆ ಕಾಮಗಾರಿ
ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ 29 ಕೋಟಿ ರೂ. ಹಣ ಉಪ ವಿಭಾಗಾಧಿಕಾರಿ ಖಾತೆಯಲ್ಲಿದೆ. ಹಿಂದಿನ ಶಾಸಕರ ಅವಧಿಯಲ್ಲಿ ಒತ್ತಾಯಪೂರ್ವಕವಾಗಿ ಅಲ್ಲಿಯ ಸ್ಥಳೀಯರು ತೆರವಿಗೆ ಮುಂದಾಗಿದ್ದರಿಂದ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ರಸ್ತೆ ಅಗಲೀಕರಣಕ್ಕೆ ಜಾಗ ಬಿಟ್ಟುಕೊಡಲು ಒಪ್ಪಿಗೆ ನೀಡಿದ್ದಾರೆ. ಶೀಘ್ರ ಪರಿಹಾರದ ಹಣ ನೀಡಿ, ಕಾಮಗಾರಿ ಆರಂಭಿಸಲಾಗುತ್ತದೆ. ಬಿ.ಹೆಚ್.ರಸ್ತೆ ಅಗಲೀಕರಣ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ, ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಸೈಯದ್ ಜಾಕೀರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ವಾಯುಸೇನೆ ಅಧಿಕಾರಿ ಮಂಜುನಾಥ್ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್ ಮಾಹಿತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200