ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಸೇತುವೆಯನ್ನು (Bridge) ಜುಲೈ 14 ರಂದು ಉದ್ಘಾಟಿಸಲು ದಿನಾಂಕ ನಿಗದಿಪಡಿಸಿರುವುದಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಸ ವ್ಯಕ್ತಪಡಿಸಿದ್ದಾರೆ.
ಇದು ಐದು ದಶಕಗಳ ಕಾಲದ ಶರಾವತಿ ಹಿನ್ನೀರು ಸಂತ್ರಸ್ತರ ಕನಸಿಗೆ ನಿಜವಾದ ಸಮಯ. ಸೇತುವೆ ನಿರ್ಮಾಣಕ್ಕಾಗಿ ನಡೆದ ದೀರ್ಘಕಾಲದ ಹೋರಾಟಕ್ಕೆ ಸಂದ ಜಯ ಇದಾಗಿದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಸೇತುವೆ ಕಾಮಗಾರಿ ವೀಕ್ಷಿಸಲು ಸ್ಥಳಕ್ಕೆ ಆಗಮಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೇತುವೆ ಉದ್ಘಾಟನೆ ಸದ್ಯಕ್ಕಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ತಾವು ಶುಕ್ರವಾರ ಸೇತುವೆ ಬಳಿ ಹೋಗಿ ಬಂದ ತಕ್ಷಣ ಸಂಸದರು ಉದ್ಘಾಟನೆ ದಿನಾಂಕ ಘೋಷಿಸಿದ್ದಾರೆ ಎಂದು ಶಾಸಕ ಬೇಳೂರು ತಿಳಿಸಿದ್ದಾರೆ.

ಸೇತುವೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗುತ್ತಿರುವುದು ಸಂತೋಷದ ವಿಷಯ ಎಂದು ಅವರು ಹೇಳಿದ್ದಾರೆ. ಸೇತುವೆ ಹೋರಾಟಕ್ಕೆ ಶ್ರಮಿಸಿದ ಎಲ್ಲರಿಗೂ ಉದ್ಘಾಟನೆ ಸಂದರ್ಭದಲ್ಲಿ ಮನ್ನಣೆ ದೊರಕಬೇಕಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಮಿನಿ ಬಸ್ ಪಲ್ಟಿ

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















