ಸಾಗರದ ಅಮಟೆಕೊಪ್ಪ ಬಳಿ ಬೈಕ್‌ಗೆ ಕಾರು ಡಿಕ್ಕಿ, ಹೇಗಾಯ್ತು ಘಟನೆ?

ಶಿವಮೊಗ್ಗ ಲೈವ್.ಕಾಂ | ಸಾಗರ

ಸಾಗರ-ಹೊಸನಗರ ರಸ್ತೆಯ ಅಮಟೆಕೊಪ್ಪ ಪೆಟ್ರೋಲ್ ಬಂಕ್ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು, ಸವಾರ ಗಾಯಗೊಂಡಿದ್ದಾನೆ.

SAGARA-NEWS-GRAPHICS-BY-SHIVAMOGGA-LIVE

ಬಿಳಗೋಡಿನ ವಿಶ್ವನಾಥ ಗಾಯಗೊಂಡವರು. ಅಮಟೆಕೊಪ್ಪ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದಾಗ ಹೆಗ್ಗೋಡು ಕಡೆಗೆ ತಿರುಗಲು ಇಂಡಿಕೇಟರ್ ಹಾಕಿ, ಬಲಭಾಗಕ್ಕೆ ತಿರುಗಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹೊಸನಗರ ಕಡೆಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಬೈಕ್ ಸವಾರ ವಿಶ್ವನಾಥ ಅವರ ಬಲಗಾಲು, ತಲೆಗೆ ತೀವ್ರ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.