ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 OCTOBER 2023
SAGARA : ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ (KSRTC BUS) ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಮೂವರು ಯುವಕರಿಗೆ ಗಾಯವಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಸಾಗರ ಪಟ್ಟಣದ ಗಾಂಧಿ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಬೈಕ್ ಬಸ್ಸಿನ ಹಿಂಬದಿಗೆ ಡಿಕ್ಕಿಯಾಗಿ ಬಸ್ಸಿನಡಿ ಸಿಲುಕಿಕೊಂಡಿದೆ. ಘಟನೆಯಲ್ಲಿ ಮೂವರು ಯುವಕರು ಗಾಯಗೊಂಡಿದ್ದರು. ಕೂಡಲೆ ಮೂವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿತ್ತು.
ಇದನ್ನೂ ಓದಿ – ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಫಾಸ್ಟ್ ಫುಡ್ ವ್ಯಾಪಾರಿ
ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















