ಅಪಘಾತ, ಸರ್ಕಾರ ಶಾಲೆ ಮುಖ್ಯ ಶಿಕ್ಷಕ ಸಾವು, ಹೇಗಾಯ್ತು ಘಟನೆ?

ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮುಖ್ಯ ಶಿಕ್ಷಕರೊಬ್ಬರು ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಹೊಸನಗರ ತಾಲ್ಲೂಕಿನ ಆಲಗೇರಿ ಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ, ಸಾಗರ ತಾಲ್ಲೂಕಿನ ನೇದರವಳ್ಳಿ ಗ್ರಾಮದ ನಿವಾಸಿ ನಾರಾಯಣಪ್ಪ (58) ಮೃತಪಟ್ಟ ದುರ್ದೈವಿ.

ANANDAPURA-NEWS-GRAPHICS-BY-SHIVAMOGGA-LIVE

ಹೇಗಾಯ್ತು ಅಪಘಾತ?

ನಾರಾಯಣಪ್ಪ ಅವರು ಮಂಗಳವಾರ ಸಂಜೆ ಶಾಲೆಯ ಕೆಲಸ ಮುಗಿಸಿ ತಮ್ಮ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ನೇದರವಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಬೈಕ್ ಇವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!