ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 JUNE 2021
ಮನೆಯೊಂದರಲ್ಲಿ ಸ್ಪೋಟ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ನಾಡ ಬಾಂಬ್‍ನಿಂದಾಗಿ ಸ್ಪೋಟ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಮನೆಯವರು ಇದನ್ನು ನಿರಾಕರಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಸಂಗಿ ಕರಿಯಪ್ಪ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ.
ನಾಡ ಬಾಂಬ್ ಬಗ್ಗೆ ಶಂಕೆ
ಸಂಗಿ ಕರಿಯಪ್ಪ ಅವರ ಮನೆಯಲ್ಲಿ ನಾಡ ಬಾಂಬ್ ಸ್ಪೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಸ್ಪೋಟದ ತೀವ್ರತೆಗೆ ಬಚ್ಚಲು ಮನೆ ಸಂಪೂರ್ಣ ಬಿರುಕು ಬಿಟ್ಟಿದೆ. ಹೆಂಚು ಹಾರಿ ಅಕ್ಕಪಕ್ಕ ಮನೆಗಳ ಮೇಲೆ ಬಿದ್ದಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಹಂಡೆ ಸ್ಪೋಟ ಆಗಿದೆ
ಇನ್ನು, ನಾಡ ಬಾಂಬ್ ಆರೋಪವನ್ನು ನಿರಾಕರಿಸಿರುವ ಸಂಗಿ ಕರಿಯಪ್ಪ, ಬಚ್ಚಲು ಮನೆಯಲ್ಲಿ ನೀರು ಕಾಯಿಸುವಾಗ ಹಂಡೆ ಸ್ಪೋಟಗೊಂಡಿದೆ. ತಮ್ಮ ಮನೆಯಲ್ಲಿ ನಾಡ ಬಾಂಬ್‍ಗಳಿಲ್ಲ ಎಂದು ಹೇಳಿದ್ದಾರೆ.
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]