ಶಿವಮೊಗ್ಗ ಲೈವ್.ಕಾಂ | 18 ಏಪ್ರಿಲ್ 2019
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್, ಉಳ್ಳೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಪಲ್ಟಿಯಾಗಿದ್ದ ಬಸ್ಸಿನಡಿ ಹಲವು ಸಿಲುಕಿರುವ ಆತಂಕವಿತ್ತು. ಸ್ಥಳೀಯರು, ಪೊಲೀಸರ ನೆರವಿನಿಂದ ಪ್ರಯಾಣಿಕರ ರಕ್ಷಣಾ ಕಾರ್ಯ ನಡೆಯಿತು.
ಹೊನ್ನಾವರದ ಕೀರ್ತನಾ (12), ಸುಜಾತಾ (40), ಚಿತ್ರದುರ್ಗದ ಹಿರಿಯೂರು ತಾಲೂಕಿನ ಮಹಮ್ಮದ್ ಯಾಸೀನ್ (16) ಮೃತರು. ಇನ್ನು, ಗಾಯಗೊಂಡವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆ ಮತ್ತು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು










