ಶಿವಮೊಗ್ಗ ಲೈವ್
ಸಾಗರ: ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಆನಂದಪುರ ಸಮೀಪದ ಕಾಸ್ಪಾಡಿ ಕೆರೆ ಏರಿ ರೇಲಿಂಗ್‌ಗೆ ಡಿಕ್ಕಿ ಹೊಡೆದಿದ್ದು, ಬಸ್ ಕೆರೆಗೆ ಬೀಳುವ ದೊಡ್ಡ ಅಪಾಯ ತಪ್ಪಿದೆ.
ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳು ವಾಪಸ್ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಬಸ್‌ನಲ್ಲಿ ಒಟ್ಟು 48 ಪ್ರಯಾಣಿಕರು ಇದ್ದರು. ಅಪಘಾತದ ತೀವ್ರತೆಗೆ 10 ವಿದ್ಯಾರ್ಥಿಗಳು ಹಾಗೂ ಒಬ್ಬ ಉಪನ್ಯಾಸಕಿಗೆ ಗಾಯಗಳಾಗಿವೆ. ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.

ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.