ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 JUNE 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SAGARA : ಶಿವಮೊಗ್ಗ – ತಾಳಗುಪ್ಪ ರೈಲ್ವೆ ಮಾರ್ಗವನ್ನು ಹೊನ್ನಾವರದವರೆಗೆ ವಿಸ್ತರಿಸಿ ಕೊಂಕಣ (Konkan) ರೈಲ್ವೆ ಮಾರ್ಗದ ವ್ಯಾಪ್ತಿಗೆ ಸೇರಿಸುವ ಯೋಜನೆಗೆ ಮರು ಚಾಲನೆ ನೀಡಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ ತಿಳಿಸಿದರು.
ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಏರ್ಪಡಿಸಿದ್ದ ಮತದಾರರಿಗೆ, ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಿಸುವ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಶಿವಮೊಗ್ಗ – ತಾಳಗುಪ್ಪ ರೈಲ್ವೆ ಮಾರ್ಗವನ್ನು ಹೊನ್ನಾವರದವರೆಗೆ ವಿಸ್ತರಿಸಿ ಕೊಂಕಣ ರೈಲ್ವೆ ವಿಭಾಗಕ್ಕೆ ಸೇರಿಸಬೇಕು ಎಂಬುದು ಬಹು ಕಾಲದ ಬೇಡಿಕೆ. ಆದ್ಯತೆ ಮೇರೆಗೆ ಈ ಯೋಜನೆಗೆ ಮರು ಚಾಲನೆ ನೀಡಲಾಗುತ್ತದೆ. ಇನ್ನು, ರಾಜ್ಯದ ಎಂಟು ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ ಕೇಂದ್ರದಿಂದ 5,756 ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಪೈಕಿ ಶಿವಮೊಗ್ಗ ವಿಭಾಗಕ್ಕೆ 2,623 ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ಭರವಸೆ ಉಳಿಸಿಕೊಳ್ಳಲಾಗುತ್ತದೆ. ಈ ಸಂಬಂಧ ರಾಜ್ಯ ಸರ್ಕಾರ ಪ್ರಸ್ತಾವನೆಯನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್, ಪ್ರಸನ್ನ ಕೆರೆಕೈ, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ವಿ.ಮಹೇಶ್, ಡಾ.ರಾಜನಂದಿನಿ ಕಾಗೋಡು, ಮಲ್ಲಿಕಾರ್ಜುನ ಹಕ್ರೆ, ಕೆ.ಎಸ್.ಪ್ರಶಾಂತ್, ಮಧುರಾ ಶಿವಾನಂದ್, ಕವಿತಾ ಜಯಣ್ಣ ಶ್ರೀನಿವಾಸ್ ಮೇಸ್ತ್ರಿ ಇದ್ದರು.
ಇದನ್ನೂ ಓದಿ – ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಇಲ್ಲಿದೆ ಹತ್ತು ಫೋಟೊ ಸಹಿತ ಮಾಹಿತಿ