ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
![]() |

ಸಾಗರದ ಆಕಾಶ್ (21), ಅಣಲೆಕೊಪ್ಪದ ಲೋಹಿತ್ (21) ಮೃತಪಟ್ಟವರು. ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಬಳಿ ಘಟನೆ ನಡೆದಿದೆ.
ಜೋಗದಿಂದ ಆಲ್ಟೋ ಕಾರಿನಲ್ಲಿ ಸಾಗರಕ್ಕೆ ಮರಳುವಾಗ, ಚಾಲಕನ ನಿಯಂತ್ರಣ ತಪ್ಪಿ, ಕಾರು ಮರಕ್ಕೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಇನ್ನು, ಗಂಭೀರವಾಗಿ ಗಾಯಗೊಂಡಿದ್ದ ಆಕಾಶ್ ಮತ್ತು ಲೋಹಿತ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200