ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಸಾಗರ: ಪಟ್ಟಣದ ತಾಯಿ ಮತ್ತು ಮಗು ಆಸ್ಪತ್ರೆಯ ಮುಂಭಾಗ ನಿಲ್ಲಿಸಲಾಗಿದ್ದ ಕಾರಿನಲ್ಲಿ (car) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋಗಿದೆ. ಆಸ್ಪತ್ರೆಯ ಮುಂಭಾಗ ನಿಂತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
Car-incident-at-Sagara-infront-of-Mother-and-Child-hospital.

ತಕ್ಷಣೆವೆ ವಾಹನದ ಮುಂಭಾಗ ಹೊತ್ತಿ ಉರಿದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿಕೊಂಡಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಸಾಗರ ಪಟ್ಟಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Car-incident-at-Sagara-infront-of-Mother-and-Child-hospital.

ಇದನ್ನೂ ಓದಿ : ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment