ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021
ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಸಿಕೊಂಡಿದ್ದು ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿತು. ಸಾಗರದ ಸರ್ಕಾರಿ ಆಸ್ಪತ್ರೆ ಬಳಿ ಇರುವ ಕೆನರಾ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ.
ಕಾರಿನಲ್ಲಿ ಚಾಲಕ ರಮೇಶ್ ಒಬ್ಬರೆ ಇದ್ದರು. ಸಾಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಂಡು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಂದಗದ್ದೆಯಲ್ಲಿರುವ ಗ್ಯಾಸ್ ಗೋಡೋನ್ ಕಡೆಗೆ ರಮೇಶ್ ತೆರಳುತ್ತಿದ್ದರು.
ದಟ್ಟ ಹೊಗೆ, ಧಗಧಗ ಉರಿದ ಬೆಂಕಿ
ಸರ್ಕಾರಿ ಆಸ್ಪತ್ರೆ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಬೆಂಕಿ ಆವರಿಸಿಕೊಂಡಿದೆ. ಹಾಗಾಗಿ ಚಾಲಕ ರಮೇಶ್ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದ್ದು ನೀರು ಸುರಿದು ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೆಂಕಿ ನಿಯಂತ್ರಣಕ್ಕೆ ಬರಲಿಲ್ಲ.
ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದರು.
ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






