ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2023
ANANDAPURA : ರಸ್ತೆ ಪಕ್ಕದ ಮರಕ್ಕೆ ಕಾರು (Car) ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಈ ಪೈಕಿ ಒಬ್ಬನಿಗೆ ಗಂಭೀರ ಗಾಯವಾಗಿದೆ.

ಸಾಗರ ತಾಲೂಕು ಆನಂದಪುರ ಸಮೀಪ ಅಂಬ್ಲಿಗೊಳ ಬಳಿ ಘಟನೆ ಸಂಭವಿಸಿದೆ. ಕಾಂಗ್ರೆಸ್ ಮುಖಂಡ ತುರುಗೋಡು ನಾಗರಾಜ ಗೌಡ (55) ಮೃತಪಟ್ಟಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಶಿಕಾರಿಪುರದಿಂದ ಮಾರುತಿ ಸ್ವಿಫ್ಟ್ ಕಾರಿನಲ್ಲಿ (Car) ತಮ್ಮೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ತುರುಗೋಡು ನಾಗರಾಜ ಗೌಡ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಲಾರಿ ಚಾಲಕನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದ ಯುವಕರು, ಮೆಗ್ಗಾನ್ ಆಸ್ಪತ್ರೆಗೆ ದಾಖಲು
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





