ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ, ಮೈ ಜುಮ್‌ ಅನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಸಾಗರ: ತಾಲೂಕಿನ ಆನಂದಪುರ (Anandapura) ಬಸ್‌ ನಿಲ್ದಾಣದ ಎದುರಿನ ಬಿ.ಹೆಚ್. ರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತ (Road Accident) ದೃಶ್ಯ ಸಮೀಪದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದ ನಿವಾಸಿ ರತ್ನಮ್ಮ (54) ಅಪಘಾತದಲ್ಲಿ ಗಾಯಗೊಂಡವರು. ಕಾರು ಡಿಕ್ಕಿಯಾದ ರಭಸಕ್ಕೆ ಮಹಿಳೆ ಹಾರಿ ರಸ್ತೆಯ ಮೇಲೆ ಬಿದ್ದಿದ್ದಾರೆ. ಈ ಭಯಾನಕ ದೃಶ್ಯ (Horrific Footage) ಸಮೀಪದ ಸಿಸಿಟಿವಿ (CCTV Camera) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಚಾಲಕ ಕಾರನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ (Hit and Run).

Car-hits-a-woman-at-Anandapura-in-Sagara-Taluk

ಗಾಯಾಳು ರತ್ನಮ್ಮ ಅವರನ್ನು ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ (Government Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ (Police Station) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.