ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ : ರಸ್ತೆಯಲ್ಲಿ ಕಾರಿಗೆ ಅಡ್ಡಲಾಗಿ ಬಂದ ಹಾವನ್ನು (Snake) ತಪ್ಪಿಸುವ ಭರದಲ್ಲಿ ಚಾಲಕ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡಿಸಿದ್ದಾನೆ. ಘಟನೆಯಲ್ಲಿ ಲಾರಿ ಪಲ್ಟಿಯಾಗಿ ಶುಂಠಿ ಚೀಲಗಳು ಕೆಳಗೆ ಬಿದ್ದಿವೆ.
ಇದನ್ನೂ ಓದಿ » ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ
ಸಾಗರ ತಾಲೂಕಿನ ಭೀಮನೇರಿ ಸಮೀಪ ಘಟನೆ ಸಂಭವಿಸಿದೆ. ಸಾಗರದಿಂದ ಶುಂಠಿ ತುಂಬಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿ ಮತ್ತು ಹುಬ್ಬಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಹಾವನ್ನು (Snake) ತಪ್ಪಿಸಲು ಹೋಗಿ ಕಾರಿನ ಚಾಲಕ ಎದುರು ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆಸಿದ್ದಾನೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಲಾರಿ ಚಾಲಕ ರಸ್ತೆ ಪಕ್ಕಕ್ಕೆ ತೆಗೆದುಕೊಂಡಾಗ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಶುಂಠಿಚೀಲಗಳು ಕೆಳಗುರುಳಿವೆ. ಲಾರಿ ಮತ್ತು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.


LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





