ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 21 ಮೇ 2020
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಟ್ವಿಟರ್ ಖಾತೆ ವಿರುದ್ಧ ಸಾಗರದಲ್ಲಿ ದೂರು ದಾಖಲಾಗಿದೆ. @INCIndia ಎಂಬ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಗಾಳಿ ಸುದ್ದಿ ಹರಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಟ್ವೀಟರ್ ಖಾತೆಯ ನಿರ್ವಾಹಕರು, ಅಧ್ಯಕ್ಷರು ಮತ್ತು ಸಂಬಂಧಪಟ್ಟವರ ವಿರುದ್ಧ ಸಾಗರದ ವಕೀಲ ಕೆ.ವಿ.ಪ್ರವೀಣ್ ದೂರು ನೀಡಿದ್ದಾರೆ.
ಪಿಎಂ ಕೇರ್ಸ್ ಫಂಡ್ ಪ್ರಧಾನಿ ಅವರ ವೈಯಕ್ತಿಕ ಕೇರ್ ಫಂಡ್ ಆಗಿದೆ. ಕೇರ್ಸ್ ಹಣವನ್ನು ಸದುಪಯೋಗ ಮಾಡುತ್ತಿಲ್ಲ ಎಂದು ಅವಹೇಳನಕಾರಿಯಾಗಿ ಫೋಟೊ ಬಳಕೆ ಮಾಡಿಕೊಂಡು, ಟ್ವೀಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೂರಿ ನೀಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]