SHIVAMOGGA LIVE NEWS | 30 DECEMBER 2022
ಕಾರ್ಗಲ್ : ಜೋಗ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಲ್ಲಿನ ಕೆಪಿಸಿ ಎಸ್.ವಿ.ಪಿ ಕಾಲೋನಿಯಲ್ಲಿ ದನದ ಮೇಲೆ ಚಿರತೆ ದಾಳಿ ನಡೆಸಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. (cheetah bone)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಂಗಳವಾರ ರಾತ್ರಿ ದನದ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ. ಇದರ ದೃಶ್ಯ ಇಲ್ಲಿನ ಕ್ರೀಡಾಂಗಣದ ಬಳಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುತ್ತಲು ಕೆಪಿಸಿ ನಿಗಮದ ನೌಕರರ ಮನೆಗಳಿವೆ. ಕಾಲೋನಿಯ ಮಧ್ಯ ಭಾಗದಲ್ಲಿ ಚಿರತೆ ದಾಳಿ ನಡೆಸಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
(cheetah bone)
ಕಾಲೋನಿಗೆ ಬಂತು ಬೋನ್
ಇನ್ನು, ಚಿರತೆ ದಾಳಿಯ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಜ್ಜೆ ಗುರುತನ್ನು ಪರಿಶೀಲಿಸಿ ಚಿರತೆ ಅನ್ನುವುದನ್ನು ಖಚಿತಪಡಿಸಿದ್ದಾರೆ. ಮತ್ತೆ ಇಲ್ಲಿಗೆ ಚಿರತೆ ಬರುವ ಸಾಧ್ಯತೆ ಇರುವುದರಿಂದ ಕಾಲೋನಿಯಲ್ಲಿ ಬೋನ್ ಇಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಕಾಡಿನಲ್ಲಿ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ
ಜೋಗ ಸುತ್ತಮುತ್ತ ಚಿರತೆ ಭೀತಿ
ಕಳೆದ ಕೆಲವು ದಿನದಿಂದ ಜೋಗ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದೆ. ಹಾಗಾಗಿ ವಿವಿಧೆಡೆ ಚಿರತೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸುತ್ತಿದ್ದಾರೆ. ಜೋಗ ಸುತ್ತಮುತ್ತ ಫಾತಿಮಾಪುರ, ವರ್ಕ್ ಮನ್ ಬ್ಲಾಕ್ ಸೇರಿದಂತೆ ಕೆಲವು ಕಡೆ ಚಿರತೆ ಕಾಣಿಸಿಕೊಂಡಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



