ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020
ಲಾಂಚ್‍ನಲ್ಲಿ ವಾಹನ ನಿಲ್ಲಿಸುವ ವಿಚಾರದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ನಡುವೆ ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕಳಸವಳ್ಳಿ ದಡದಲ್ಲಿ ಬುಧವಾರ ಘಟನೆ ಸಂಭವಿಸಿದೆ.
![]() |
ಗದಗದಿಂದ ಸಿಗಂದೂರಿಗೆ ಬಂದಿದ್ದ ಪ್ರವಾಸಿಗರು, ತಮ್ಮ ವಾಹನವನ್ನು ಮೊದಲು ಲಾಂಚ್‍ಗೆ ಹತ್ತಿಸಬೇಕು ಎಂದು ಜಗಳ ತೆಗೆದಿದ್ದಾರೆ. ಈ ವೇಳೆ ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಲಾಂಚ್ ಸಿಬ್ಬಂದಿ ಮತ್ತು ಸ್ಥಳೀಯರೆ ಜಗಳ ಬಿಡಿಸಿದ್ದಾರೆ.
ಕರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದೆ. ಆದರೂ ವಿವಿಧೆಡೆಯಿಂದ ಭಕ್ತರು ದೇಗುಲದ ಬಳಿಗೆ ಬಂದು ಹೋಗುತ್ತಿದ್ದಾರೆ.
Image | File Photo
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200