ಶಿವಮೊಗ್ಗ ಲೈವ್.ಕಾಂ | SAGARA NEWS | 2 NOVEMBER 2020
ಸಿಗಂದೂರು ಸೇತುವೆ ಕಾಮಗಾರಿ ಪರಿಶೀಲನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದ್ಯದಲ್ಲೇ ಭೇಟಿ ನೀಡಲಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರದಲ್ಲಿ ಮಾತನಾಡಿದ ಹಾಲಪ್ಪ, ತುಮರಿ ಸೇತುವೆ ನಿರ್ಮಾಣ ಸ್ಥಳಕ್ಕೆ ಸಿಎಂ ಭೇಟಿ ನೀಡುವ ಕುರಿತು ಎರಡ್ಮೂರು ಬಾರಿ ತಮ್ಮೊಂದಿಗೆ ಚರ್ಚಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಭೇಟಿ ನೀಡುವುದು ಬೇಡ ಎಂಬ ಸಲಹೆ ಬಂದಿದೆ. ಹಾಗಾಗಿ ಅವರು ಸದ್ಯದಲ್ಲೇ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದರು.
ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಪೂರ್ಣ
ನಗರಸಭೆ ವತಿಯಿಂದ 5.50 ಕೋಟಿ ರೂ. ವೆಚ್ಚದಲ್ಲಿ ಸಾಗರ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದರ ಪರಿಶೀಲನೆಯನ್ನು ನಡೆಸಲಾಗಿದೆ. ಬಸ್‍ಗಳ ಸಂಚಾರಕ್ಕೆ ಅನುಕೂಲ ಆಗುವಂತೆ ವಿದ್ಯುತ್ ಕಂಬ, ಟ್ರಾನ್ಸ್‍ಫರ್ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆನ್‍ಲೈನ್ ಮೂಲಕ ಬಸ್ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಗಣಪತಿ ಕೆರೆ ಬಳಿಯ ಬೃಹತ್ ಧ್ವಜಸ್ತಂಭವನ್ನು ಜ.26ರಂದು ಉದ್ಘಾಟನೆ ಮಾಡಲಾಗುತ್ತದೆ ಎಂದರು.
ಉಪ ವಿಭಾಗಾಧಿಕಾರಿ ಡಾ.ಎಲ್.ನಾಗರಾಜ್, ಪೌರಾಯುಕ್ತ ನಾಗಪ್ಪ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ವಿ.ಮಹೇಶ್, ಕೆ.ಆರ್.ಗಣೇಶ್ ಪ್ರಸಾದ್, ಶ್ರೀನಿವಾಸ್, ಅರವಿಂದ್ ರಾಯ್ಕರ್, ಮೈತ್ರಿ ಪಾಟೀಲ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]