ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019
ನಾಳೆ ಉಪ ಚುನಾವಣೆ ಫಲಿತಾಂಶ ಬರಲಿದೆ. ಬಿಜೆಪಿ 13 ಸ್ಥಾನ, ಕಾಂಗ್ರೆಸ್ ಹಾಗು ಜೆಡಿಎಸ್ ತಲಾ ಒಂದು ಸ್ಥಾನ ಪಡೆಯಬಹುದು ಅಂತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಾಗರದ ಮಂಕಳಲೆ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೆರೆಹಾನಿ ಸಂದರ್ಭ ರಾಜ್ಯದಲ್ಲಿ ಬಿಜೆಪಿ ಮಾಡಿದ ಕೆಲಸ ಜನರಿಗೆ ಗೊತ್ತಿದೆ. ಬಿಜೆಪಿ ಸರ್ಕಾರದ ಆಡಳಿತಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಬಳಿಕ ಸಾಗರದ ಮೇಲಿನಮನೆಯಲ್ಲಿ ನಡೆಯುತ್ತಿರುವ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪುತ್ರಿ ಜಯಲಕ್ಷ್ಮಿ ಅವರ ಮದುವೆ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Chief Minister B S Yedyurappa visits Sagara To attend the marriage of Vidhanasabha Speaker Vishweshwara Hegde Kageri’s daughter in Mankalale.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422