ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 18 ಅಕ್ಟೋಬರ್ 2020
ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿನ ಗೊಂದಲಗಳ ಕುರಿತು ಜನಪ್ರತಿನಿಧಿಗಳು, ಅಧಿಕಾರಿhiಗಳ ಜೊತೆ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಶಿಕಾರಿಪುರ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಿಗಂದೂರಿನಲ್ಲಿ ಗಲಾಟೆಗಳು ನಡೆಯುತ್ತಿವೆ. ದೇವರ ಹೆಸರಲ್ಲಿ ಇಂತಹ ಘಟನೆಗಳು ನಡೆಯುವುದು ಶೋಭೆಯಲ್ಲ ಎಂದರು.
ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸುವ ಕುರಿತು ಕೇಳಿದ ಪ್ರಶ್ನೆಗೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಶಾಸಕರಾದ ಹಾಲಪ್ಪ, ಕುಮಾರ್ ಬಂಗಾರಪ್ಪ, ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422