ಶಿವಮೊಗ್ಗ ಲೈವ್.ಕಾಂ | SAGARA NEWS | 22 ನವೆಂಬರ್ 2021
ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಶಾಂತಿನಗರದ ನಿವಾಸಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ವರದಹಳ್ಳಿ ರಸ್ತೆಯಲ್ಲಿರುವ ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಪ್ರಾರ್ಥನೆ ವೇಳೆ ಜೋರಾಗಿ ಧ್ವನಿವರ್ಧಕ ಬಳಕೆ ಮಾಡುತ್ತಿದ್ದಾರೆ. ಈ ಶಬ್ದದಿಂದ ನೆರಹೊರೆಯವರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.
ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು, ವೃದ್ಧರು, ಮಕ್ಕಳು ಹೆಚ್ಚಿದ್ದಾರೆ. ಶಬ್ದ ಮಾಲಿನ್ಯದಿಂದ ಎಲ್ಲರಿಗೂ ತೊಂದರೆ ಆಗುತ್ತಿದೆ. ಆದ್ದರಿಂದ ಇದಕ್ಕೆ ನಿಯಂತ್ರಣ ಹೇರಬೇಕು ಎಂದು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಂಘಟನೆಗಳ ಪ್ರಮುಖರಾದ ನಾರಾಯಣಪ್ಪ, ರವೀಶ್ ಕುಮಾರ್, ಸಂತೋಷ್ ಶಿವಾಜಿ, ಎಡಜಿಗಳೇಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಹಕ್ಕರೆ, ಹು.ಭಾ.ಅಶೋಕ್, ಪ್ರಸಾದ್ ಜನ್ನೆ, ರಾಘವೇಂದ್ರ ಕಾಮತ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200