ಸಿಗಂದೂರು ಸೇತುವೆ, ರಾಜ್ಯದ ಸಚಿವರು, ಶಾಸಕರು ಕಾರ್ಯಕ್ರಮದಿಂದ ದೂರ, ಲೆಟರ್‌ ವಾರ್‌ ಆರಂಭ

ಸಾಗರ: ಸಿಗಂದೂರು ಸೇತುವೆ (Sigandur Bridge) ಉದ್ಘಾಟನೆಗೆ ಆಹ್ವಾನ ನೀಡಿಲ್ಲ ಎಂಬ ಆರೋಪದ ಹಿನ್ನೆಲೆ ಸ್ಥಳೀಯ ಶಾಸಕ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿದರು. ಸಾಗರಕ್ಕೆ ಆಗಮಿಸಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಲ್ಲಿಂದ ಹಿಂತಿರುಗಿದ್ದಾರೆ.

ಸಿಗಂದೂರು ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಇಂದಿನ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಮುಖಂಡರು ಬಹಿಷ್ಕರಿಸಿದರು.  

ಸಿಎಂ ಪತ್ರ ಬಹಿರಂಗ, ಜಟಾಪಟಿ

‘ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಸಚಿವ ನಿತಿನ್‌ ಗಡ್ಕರಿ ಅವರಿ ಪತ್ರ ಬರೆದಿದ್ದೇನೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಮೂಲಕ ಪತ್ರ ಬಹಿರಂಗಪಡಿಸಿದ್ದಾರೆ. ಜುಲೈ 11ರಂದು ಈ ಪತ್ರ ಬರೆಯಲಾಗಿದೆ.

ಇದನ್ನೂ ಓದಿ » ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ

ಇದರ ಬೆನ್ನಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಎರಡು ಪತ್ರಗಳನ್ನು ಬಹಿರಂಗಪಡಿಸಿದ್ದಾರೆ. ಜುಲೈ 11 ಮತ್ತು 12ರಂದು ಪ್ರತ್ಯೇಕವಾಗಿ ಎರಡು ಪತ್ರ ಬರೆದಿದ್ದಾಗಿ ತಿಳಿಸಿದ್ದಾರೆ. ‘ಕಾರ್ಯಕ್ರಮಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದಿದ್ದರೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾಗಿʼ ಎಂದು ನಿತಿನ್‌ ಗಡ್ಕರಿ ಮನವಿ ಮಾಡಿದ್ದಾಗಿ ಪತ್ರದಲ್ಲಿದೆ.

ಶಿಷ್ಟಾಚಾರ ಉಲ್ಲಂಘನೆ, ಬಹಿಷ್ಕಾರ

ಇಂದು ಪುನಃ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು. ಆದರೆ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೆಯೆ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ » ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ, ಕೇಬಲ್‌ ಬ್ರಿಡ್ಜ್‌ ವೈಭವಕ್ಕೆ ಮನಸೋತ ಕೇಂದ್ರ ಸಚಿವ

‘ಬಿಜೆಪಿಯ ಈ ನಡೆ ಪ್ರತಿಭಟಿಸಲು ಸಾಗರ ತಾಲೂಕಿನ ಇಂದಿನ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೆ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಸಚಿವರು, ಸ್ಥಳೀಯ ಶಾಸಕರಿಗೆ ಸರಿಯಾಗಿ ಆಮಂತ್ರಣ ನೀಡಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮ ಬಹಿಷ್ಕರಿಸಿದ ಸಚಿವರು, ಶಾಸಕ

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭಕ್ಕಾಗಿ ಲೋಕೋಪಯೋಗಿ ಸತೀಶ್‌ ಜಾರಕಿಹೊಳಿ ಭಾನುವಾರವೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಂದು ಸಾಗರ ಪ್ರವಾಸಿ ಮಂದಿರಕ್ಕು ತೆರಳಿದ್ದರು. ದಿಢೀರ್‌ ಬೆಳವಣಿಗೆಯಲ್ಲಿ ಪ್ರವಾಸಿ ಮಂದಿರದಿಂದ ಅವರು ಹೊರ ನಡೆದಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಸಚಿವರೊಂದಿಗೆ ಇದ್ದರು.

Congress-Leaders-did-not-attend-sigandur-bridge-inauguration

ಸೌಹಾರ್ದಯುತವಾಗಿ ಕಾರ್ಯಕ್ರಮ ಆಯೋಜಿಸಬೇಕು. ಎರಡು ಸರ್ಕಾರವು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಲೋಪ ತಿದ್ದಿಕೊಂಡು, ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು.ಸತೀಶ್‌ ಜಾರಕಿಹೊಳಿ, ಲೋಕೋಪಯೋಗಿ ಸಚಿವ

ಸೇತುವೆ ಉದ್ಘಾಟನೆ ಮಾಡಿ. ಆದರೆ ಕಾರ್ಯಕ್ರಮದ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ರಾಜಕೀಯ ಮಾಡುವುದಕ್ಕೆ ಬೇರೆ ವೇದಿಕೆ ಇದೆ. ಸೇತುವೆ ಕೇಂದ್ರ ಸರ್ಕಾರದ ಕೊಡುಗೆ. ಇಂತಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರು ಬರಬೇಕಿತ್ತು. ಆದರೆ ಅವರಿಗೆ ಆಹ್ವಾನ ನೀಡದಿರುವುದು ಖಂಡನೀಯ. ಹಸಿರುಮಕ್ಕಿ ಸೇತುವೆ ಉದ್ಘಾಟನೆಗೆ ಸಿಎಂ, ಡಿಸಿಎಂ ಅವರನ್ನು ಕರೆಯಿಸುತ್ತೇವೆ.ಬೇಳೂರು ಗೋಪಾಲಕೃಷ್ಣ, ಸಾಗರ ಶಾಸಕ

congress boycott sigandur bridge programme. Madhu Bangarappa at kubaturu

ಇನ್ನೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದ ಕುಬಟೂರಿನ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು.

ಶಿಷ್ಠಾಚಾರ ಉಲ್ಲಂಘನೆ ಆರೋಪದ ಹಿನ್ನೆಲೆ ರಾಜ್ಯ ಸರ್ಕಾರ ಕಾರ್ಯಕ್ರಮದಿಂದ ದೂರ ಉಳಿಸಿದಿದೆ. ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 14, 2025 at 8:16 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 14, 2025

Leave a Comment