ಸಾಗರ: ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಸಿಟ್ಟು ವ್ಯಕ್ತಪಡಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ನೀಡುವ ಎಚ್ಚರಿಕೆ
ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಳೆ ರಾಜೀನಾಮೆ ನೀಡಿದರೆ ತಾವೂ ಕೂಡ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಮುಖಂಡರು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಶಾಸಕರಿಗೆ ಬೆಂಬಲ ಸೂಚಿಸಿ ಸಾಗರ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಸಾಗರ ಕಾಂಗ್ರೆಸ್‌ನ ಮತ್ತಷ್ಟು ಮುಖಂಡರು ಪಕ್ಷದ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.