ಶಿವಮೊಗ್ಗ ಲೈವ್.ಕಾಂ | TYAGARTHI NEWS | 25 JUNE 2021
ಸಾಗರ ತಾಲೂಕಿನಲ್ಲಿ ಡೆಂಘೆ ಜ್ವರದ ಭೀತಿ ಹೆಚ್ಚಾಗಿದೆ. ಗ್ರಾಮದಲ್ಲಿ ಡೆಂಘೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ತ್ಯಾಗರ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಇಸಾಕ್ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕರೋನ ಕಾರ್ಯಪಡೆ ಮತ್ತು ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಉಪಾಧ್ಯಕ್ಷ ಇಸಾಕ್, ಡೆಂಘೆ ಮುನ್ನೆಚ್ಚರಿಕೆ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕರಪತ್ರಗಳನ್ನು ಹಂಚಲಾಗುತ್ತಿದೆ. ಊರಿನ ಸ್ವಚ್ಛತೆಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಶಾಲೆಯ ಕೊಠಡಿಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಬೇಕಿದೆ. ಇದಕ್ಕೆ ಪಂಚಾಯಿತಿ ವತಿಯಿಂದ ನೆರವು ನೀಡಲು ಸಿದ್ಧ ಎಂದು ಅವರು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀದೇವಿ ಮಾತನಾಡಿ, ಲಾಕ್ ಡೌನ್ ಸಡಿಲ ಮಾಡಲಾಗಿದೆ. ಹಾಗೆಂದು ಜನರು ಮೈ ಮರೆಯುವಂತಿಲ್ಲ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಮೂರನೆ ಅಲೆ ಬಗ್ಗೆ ಎಚ್ಚರದಿಂದ ಇರಬೇಕು. ಮಕ್ಕಳ ವಿಚಾರದಲ್ಲೂ ನಿರ್ಲಕ್ಷ ತೋರಬಾರದು ಎಂದು ತಿಳಿಸಿದರು.
ಪಿಡಿಒ ಮಂಜಾನಾಯ್ಕ್, ಗ್ರಾಮ ಲೆಕ್ಕಿಗ ಫಕೀರೇಶ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.
(ಶಿವಮೊಗ್ಗ ಲೈವ್ನ ನಮ್ಮೂರ ನ್ಯೂಸ್ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ.)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200