ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020
ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ರಾಜಕಾರಣಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ಶಾಸಕ, ಎಂಎಸ್‍ಐಎಲ್ ಬೋರ್ಡ್ ಅಧ್ಯಕ್ಷ ಹರತಾಳು ಹಾಲಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಲೋಡ್ ಮಾಡಿರುವ ಶಾಸಕ ಹಾಲಪ್ಪ, ತಾವು, ತಮ್ಮ ಪತ್ನಿ, ಕಾರು ಚಾಲಕ ಮತ್ತು ಓರ್ವ ಸಿಬ್ಬಂದಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ ಎಂದು ತಿಳಿಸಿದ್ದಾರೆ.
ಅಧಿಕಾರ ಸ್ವೀಕರಾದ ಬಳಿಕ ಐಸೊಲೇಷನ್
ಇತ್ತೀಚೆಗಷ್ಟೇ ಎಂಎಸ್‍ಐಎಲ್ ಅಧ್ಯಕ್ಷರಾಗಿ ಹರತಾಳು ಹಾಲಪ್ಪ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹರತಾಳು ಹಾಲಪ್ಪ ಅವರು ಯಾರಿಗೂ ಸಿಕ್ಕಿರಲಿಲ್ಲ. ಇದೀಗ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ.
ಇನ್ನು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಕೂಡಲೆ ಐಸೊಲೇಷನ್ ಆಗಬೇಕು ಮತ್ತು ಕರೋನ ಚಿಕಿತ್ಸೆ ಪಡೆಯುವಂತೆ ಹರತಾಳು ಹಾಲಪ್ಪ ಅವರು ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]