ಶಿವಮೊಗ್ಗ ಲೈವ್.ಕಾಂ | SAGARA NEWS | 20 ಆಗಸ್ಟ್ 2020
ಸಾಗರ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಸಾಗರ ಮತ್ತು ಸೊರಬ ತಾಲೂಕಿನ ಕರೋನ ಸೋಂಕಿತರಿಗೆ ಈ ಸೆಂಟರ್ನಲ್ಲಿ ಚಿಕಿತ್ಸೆ ಸಿಗಲಿದೆ ಎಂದು ಉಪ ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೇಗಿದೆ ಸೆಂಟರ್? ವಿಶೇಷತೆಗಳೇನು?
ಎಷ್ಟು ಹಾಸಿಗೆ? | ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. 150 ಹಾಸಿಗೆ ಸಾಮರ್ಥ್ಯವಿದೆ. ಈಗ 100 ಹಾಸಿಗೆ ಸಿದ್ಧವಾಗಿದೆ. 50 ಹಾಸಿಗೆಗೆ ಆಕ್ಸಿಜನ್ ಸಂಪರ್ಕ ಕಲ್ಪಿಸಲಾಗಿದೆ. ಉಳಿದ 50 ಹಾಸಿಗೆಗೆ ಆಕ್ಸಿಜನ್ ಸಂಪರ್ಕ ಕಲ್ಪಿಸಲಾಗುತ್ತಿದೆ.
ಮೊಬೈಲ್ ಟೀಂ | ಸಾಗರ ಮತ್ತು ಸೊರಬ ತಾಲೂಕಿನಲ್ಲಿ ಸೋಂಕಿತರನ್ನು ಕರೆತರಲು ಮೊಬೈಲ್ ಟೀಮ್ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆ ಹೇಗಿರುತ್ತೆ? | ಸೋಂಕಿತರಿಗೆ ಡಿಸಿಹೆಚ್ ಸೆಂಟರ್ನಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಇತರೆ ಕಾಯಿಲೆಗಳು ಇರುವ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ತೀರಾ ಅಗತ್ಯವಿದ್ದರಷ್ಟೇ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗುತ್ತದೆ.
24 ಗಂಟೆ ಚಿಕಿತ್ಸೆ, ಸೆಕ್ಯೂರಿಟಿ | ಕೋವಿಡ್ ಕೇರ್ ಸೆಂಟರ್ನಲ್ಲಿ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಸೆಂಟರ್’ಗೆ ರಕ್ಷಣೆಗೆ ಇಬ್ಬರು ಪೊಲೀಸರು ನಿಯೋಜಿಸಲಾಗುತ್ತದೆ. ಬೆಳಗ್ಗೆ ಮತ್ತು ರಾತ್ರಿ ಪಾಳಿಯಲ್ಲಿ ಪೊಲೀಸರು ರಕ್ಷಣೆ ಒದಗಿಸಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]