ಶಿವಮೊಗ್ಗ ಲೈವ್.ಕಾಂ | SAGARA NEWS | 2 ಸೆಪ್ಟಂಬರ್ 2020
ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಅವರು, ಅಲ್ಲಿಯೇ ಚಿಕಿತ್ಸೆ ಪಡೆಯುವುದಾಗಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಪ್ರಕಟಿಸಿರುವ ಮಲ್ಲಿಕಾರ್ಜುನ ಹಕ್ರೆ, ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಎಂದು ದೃಢಪಟ್ಟಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೂಡಲೆ ಪರೀಕ್ಷೆಗೆ ಒಳಗಾಗಿ ಎಂದು ವಿನಂತಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಕೋವಿಡ್ ಪರೀಕ್ಷೆಗೆ ತಾವು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ಮಲ್ಲಿಕಾರ್ಜುನ ಹಕ್ರೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ವಿಮಾ ಸೌಲಭ್ಯವಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಕಾಶವಿದೆ. ಆದರೆ ಜನರಲ್ಲಿ ಭರವಸೆ ಮೂಡಿಸಬೇಕಿದೆ. ಹಾಗಾಗಿ ಸರ್ಕಾರಿ ಅಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]