ಶಿವಮೊಗ್ಗ ಲೈವ್.ಕಾಂ | 5 ಜನವರಿ 2019
ಮಂಗನ ಕಾಯಿಲೆಯಿಂದ ತೀವ್ರ ಆತಂಕಕ್ಕೀಡಾಗಿರುವ ಗ್ರಾಮಕ್ಕೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಖುದ್ದಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ, ಎಚ್ಚರದಿಂದ ಇರುವಂತೆ ಸಲಹೆ ನೀಡಿದರು.

ಸಾಗರ ತಾಲೂಕಿನ ಅರಳಗೋಡಿಗೆ ಜಿಲ್ಲಾಧಿಕಾರಿ ದಯಾನಂದ್ ಭೇಟಿ ನೀಡಿದರು. ಕೆಲಕಾಲ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ, ಆರೋಗ್ಯ ಇಲಾಖೆ ಸೂಕ್ತ ನಿಗಾ ವಹಿಸುತ್ತಿಲ್ಲ ಅಂತಾ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ನಿಗಾ ವಹಿಸುತ್ತಿಲ್ಲ ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ ಸೂಕ್ತ ನಿಗಾ ವಹಿಸುತ್ತಿಲ್ಲ. ಸಾಗರ ಉಪವಿಭಾಗೀಯ ಆಸ್ಪತ್ರೆ ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ನೀಡಬೇಕು. ಅರಳಗೋಡಿನಲ್ಲಿ ಸಹಾಯವಾಣಿ ತೆರೆಯಬೇಕು. ಮಂಗನ ಕಾಯಿಲೆಗೆ ತುತ್ತಾದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ಚಿಕಿತ್ಸೆ ವೆಚ್ಚ ಭರಿಸಬೇಕು ಅಂತಾ ಗ್ರಾಮಸ್ಥರು, ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದರು. ಈ ವೇಳೆ, ಆಕ್ರೋಶಗೊಂಡ ಗ್ರಾಮಸ್ಥರನ್ನು ಜಿಲ್ಲಾಧಿಕಾರಿ ಸಂತೈಸಿದರು.

ಸಾಗರದಲ್ಲಿ ಮಹತ್ವದ ಮೀಟಿಂಗ್
ಅರಳಗೋಡು ಭೇಟಿಗೂ ಮೊದಲು ಜಿಲ್ಲಾಧಿಕಾರಿ ಅವರು ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಂತಹ ಪರಿಸ್ಥಿತಿಯಲ್ಲೂ ಸಮಸ್ಯೆ ನಿಭಾಯಿಸಬೇಕು ಅಂತಾ ಡಿಸಿ ಸೂಚಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com

LATEST NEWS
- ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು










