ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA NEWS, 19 NOVEMBER 2024 : ಜಿಂಕೆ (Deer) ಬೇಟೆಯಾಡಿದ ಆರೋಪದ ಸಂಬಂಧ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಯರಾಮ್ ಸೂರನಗದ್ದೆ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.
ಜಿಂಕೆಯನ್ನು ಬೇಟೆಯಾಡಿ ಕೆಲವರು ಮಾಂಸವನ್ನು ಹಂಚಿಕೊಂಡಿದ್ದಾರೆ ಎಂಬ ಮಾಹಿತಿ ಆಧರಿಸಿ ಸೂರನಗದ್ದೆ ಗ್ರಾಮದಲ್ಲಿರುವ ಜಯರಾಮ್ ಅವರ ಮನೆಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಪತ್ತೆಯಾದ ಜಿಂಕೆ ಮಾಂಸವನ್ನು ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯರಾಮ್ ಪರಾರಿಯಾಗಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಇದನ್ನೂ ಓದಿ » ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್‌ಗಾಗಿ ಶೋಧ
ದಾಳಿಯಲ್ಲಿ ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ವಿಜಯಕುಮಾರ್, ಯಶವಂತ್, ಸುಮಿತಾ, ವೇದನಾಯ್ಕ್, ಉಮೇಶ್, ಶಿವನಗೌಡ ಪಾಲ್ಗೊಂಡಿದ್ದರು.
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






