ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SAGARA NEWS, 29 OCTOBER 2024 : ರಸ್ತೆಯಲ್ಲಿ ದಿಢೀರ್ ದೆವ್ವ ಪ್ರತ್ಯಕ್ಷವಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಲಾಗಿದೆ (Viral). ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇಂತಹ ಪೋಸ್ಟ್ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕು ಕಾರ್ಗಲ್ ಸಮೀಪದ ಕಂಚಿಕೈ ರಸ್ತೆಯಲ್ಲಿ ಇಬ್ಬರು ಬೈಕ್ ಸವರಾರಿಗೆ ದೆವ್ವ ಎದುರಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಇದರಿಂದ ಈ ಭಾಗದ ಜನರಲ್ಲಿ ಆತಂಕ ಉಂಟಾಗಿತ್ತು.
ಪೊಲೀಸ್ ಇಲಾಖೆಯಿಂದ ವಾರ್ನಿಂಗ್
ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು ಅಪರಾಧ. ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಪ್ರಕಟಣೆ, ಜಿಲ್ಲಾ ಪೊಲೀಸ್ ಇಲಾಖೆ
ಇದನ್ನೂ ಓದಿ » ಭೂ ಹಕ್ಕು, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಮಹತ್ವದ ಮೀಟಿಂಗ್, ಯಾರೆಲ್ಲ ಭಾಗವಹಿಸ್ತಾರೆ?