ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SCAM | 10 ಮೇ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪಿಎಸ್ಐ ಹಗರಣದ ಕಿಂಗ್ಪಿನ್ ಎನ್ನಲಾದ ದಿವ್ಯಾ ಹಾಗರಗಿ ಸಾಗರಕ್ಕೆ ಬಂದು ಬಿಜೆಪಿ ಪ್ರಮುಖ ನಾಯಕರೊಬ್ಬರನ್ನು ಭೇಟಿ ಮಾಡಿದ್ದರು. ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲೂ ತನಿಖೆ ನಡೆಸಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ ಅವರು, ದಿವ್ಯಾ ಹಾಗರಗಿ ತೀರ್ಥಹಳ್ಳಿಯಲ್ಲಿ ಎರಡು ದಿನ ಇದ್ದು ಗೃಹಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಂತರ ಸಾಗರಕ್ಕೆ ಬಂದು ಪ್ರಮುಖ ಬಿಜೆಪಿ ನಾಯಕರೊಬ್ಬ ರನ್ನು ಭೇಟಿ ಮಾಡಿದ್ದಾರೆ ಎಂದರು.
ದಿವ್ಯಾ ಹಾಗರಗಿ ಹೀಗೆ ಭೇಟಿ ಮಾಡಿದ ಬಿಜೆಪಿ ಪ್ರಮುಖರೂ ಹಗರಣದ ಕಿಂಗ್ಪಿನ್ಗಳಲ್ಲಿ ಒಬ್ಬರಾಗಿದ್ದಾರೆ. ದಿವ್ಯಾ ಹಾಗರಗಿಗೆ ಸಾಗರದಲ್ಲಿ ಬಿಜೆಪಿ ಪ್ರಮುಖರೊಬ್ಬರು ಒಂದು ದಿನ ರಕ್ಷಣೆ ನೀಡಿದ್ದುಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರಾಧ್ಯಾಪಕರೂ ಸೇರಿದಂತೆ ಬೇರೆಬೇರೆ ನೇಮಕಾತಿ ಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ. ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರದ ಸಮಗ್ರ ತನಿಖೆ ಅಗತ್ಯ. ಅರ್ಹರಿಗೆ ಅನ್ಯಾಯವಾಗದಂತೆ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ನಡೆಸುವ ಐಎಎಸ್, ಐಪಿಎಸ್ ಮಾದರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ನೇಮಕಾತಿ ನಡೆಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ