ಶರಾವತಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಡಾಕ್ಟರ್‌ ಸಾವು, ಹೇಗಾಯ್ತು ಘಟನೆ?

ಸಾಗರ: ತಾಲೂಕಿನ ಹಕ್ರೆ ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶು ವೈದ್ಯಾಧಿಕಾರಿಯೊಬ್ಬರು (Doctor) ಮೃತಪಟ್ಟಿದ್ದಾರೆ. ಮಾಸೂರು ಪಶು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸುನಿಲ್ (38) ಮೃತರು.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭಾನುವಾರ ರಜೆಯ ಹಿನ್ನೆಲೆ ಕುಟುಂಬದವರ ಜೊತೆಗೆ ಹಕ್ರೆ ಹಿನ್ನೀರು ಪ್ರದೇಶಕ್ಕೆ ತೆರಳಿದ್ದರು. ಹಿನ್ನೀರು ಭಾಗದಲ್ಲಿ ಈಜಲು ಇಳಿದಾಗ ಡಾ. ಸುನಿಲ್‌ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

Sagara-News-Update.

ತಕ್ಷಣ ಸ್ಥಳೀಯರಿಗೆ ಮಾಹಿತಿ ತಿಳಿಸಲಾಗಿತ್ತು. ಸ್ಥಳಕ್ಕೆ ಸಾಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಈಜುಗಾರರ ಸಹಾಯದೊಂದಿಗೆ ನಾಪತ್ತೆಯಾದ ವೈದ್ಯರಿಗಾಗಿ ತೀವ್ರ ಹುಡುಕಾಟ ನಡೆಸಿದರು. ಮೃತದೇಹ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?

Leave a Comment